ದಾವಣಗೆರೆ : ದಾವಣಗೆರೆಯ ಎಂ. ಬಿ .ಎ ಗೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ” ಎಂದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಹೇಳಿದರು.