ಗದಗ, ಜ. 7 : ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ . ಎನ್ ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ಹೊಸ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶ್ರೀ. ಸಿ.ಎನ್.ಶ್ರೀಧರ, ಐಎಎಸ್ (ಕೆಎನ್: 2012), ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮತ್ತು ಮುಂದಿನ ಆದೇಶದವರೆಗೆ ಗದಗ ಜಿಲ್ಲಾ ಉಪ ಆಯುಕ್ತರಾಗಿ ಶ್ರೀ ಗೋವಿಂದ ರೆಡ್ಡಿ, ಐಎಎಸ್ ವರ್ಗಾವಣೆ ಮಾಡಲಾಗಿದೆ.ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.