ಗದಗ : ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ. ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಹನಂಮತರಾಯ್, ಡಿವೈಎಸ್ಪಿ ವಿಜಯ್ ಬಿರಾದಾರ್, ಪಿಎಸ್ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.