ಗದಗ ಜ – 11 : ರಸ್ತೆ ದಾಟುವಾಗ ಎಷ್ಟೇ ಎಚ್ಚರವಹಿಸಿದರು ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಕಾರು ಹರಿದು ಅಪರಿಚಿತ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಹತ್ತಿರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ (ಚಿಕ್ಕಟ್ಟಿ ಸ್ಕೂಲ್ ) ಬಳಿ ನಡೆದಿದೆ.
ಅಂದಾಜು ಸುಮಾರು 48 ವರ್ಷದ ವ್ಯಕ್ತಿಯೊಬ್ಬನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ.ಸುಮಾರು ರಾತ್ರಿ 8.30 ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಕೊಪಳ್ಳ ಕಡೆಯಿಂದ ವೇಗವಾಗಿ ಬಂದ ಕಾರು ವ್ಯಕ್ತಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ