ಗದಗ : ಭೂ ದಾಖಲೆಗಳ ಡಿಜಟಲಿಕರಣಕ್ಕೆ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಗದಗ ತಹಶೀಲ್ದಾರ್ ಕಚೇರಿಯಲ್ಲಿ ರವಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ದಾಖಲೆಗಳ ಡಿಜಟಲೀಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದರು.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಡಿಜಟಲೀಕರಣಕ್ಕೆ ಅತ್ಯಂತ ವೇಗವನ್ನು ನೀಡಿದ್ದು ಮೂರು ತಿಂಗಳ ಒಳಗಾಗಿ ಡಿಜಿಟಲಿಕರಣ ವ್ಯವಸ್ಥೆ ಪೂರ್ಣಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗದಗ ತಾಲೂಕಿನ ಭೂ ದಾಖಲೆಗಳ ಡಿಜಟಲೀಕರಣ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಶೀಲ್ದಾರರುಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಭೂ ದಾಖಲೆಗಳನ್ನು ಎ ಬಿ ಸಿ ಡಿ ಇ ಎಂದು ವಿಂಗಡಿಸಿ, ದಾಖಲಿಕರಣ ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿ ಎ ಮತ್ತು ಬಿ ರಜಿಷ್ಟರ್ ಗಳು ೨೭೦೯೫ ಳಿದ್ದು, ಅವುಗಳು ಒಟ್ಟು ೫೧.೭೪ ಲಕ್ಷ ಪುಟಗಳಿವೆ. ಎಲ್ಲ ಹಂತಗಳ ದಾಖಲೆಗಳ ಒಟ್ಟಾರೆ ೬೮.೫೦ ಲಕ್ಷ ಪುಟಗಳಿವೆ, ಅವೆಲ್ಲವನ್ನೂ ಸ್ಕ್ಯಾನ್ ಮಾಡಿ ಸಂರಕ್ಷಣೆ ಮಾಡುವ ಮೂಲಕ ಸುಲಭವಾಗಿ ಸಿಗುವಂತೆ ಕ್ರಮ ವಹಿಸಲಾಗುತ್ತಿದೆ. ಇದೊಂದು ಸರ್ಕಾರದ ಕ್ರಾಂತಿಕಾರಿ ಆಡಳಿತಾತ್ಮಕ ಹೆಜ್ಜೆ ಎಂದು ನುಡಿದರು.
ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಜಾರಿಗೊಳಿಸಲು ಹಾಗೂ ವ್ಯವಸ್ಥೆಯನ್ನು ಚುರುಕುಗೊಳಿಸಿ ಕ್ರಿಯಾಶೀಲವಾಗಿಸಲು, ಅಲ್ಲದೆ ದಾಖಲೆಗಳನ್ನು ಶೀಘ್ರ ಸಾರ್ವಜನಿಕರಿಗೆ ತಲುಪಿಸಲು ಈ ದಾಖಲಿಕರಣ ಯೋಜನೆ ಅತ್ಯಂತ ಸಹಕಾರಿಯಾಗಿದೆ ಎಂದರು.
ಭೂ ಸುರಕ್ಷಾ ಯೋಜನೆಯಿಂದ ದಾಖಲೆಗಳು ಸುಭದ್ರ, ಶಾಶ್ವತವಾಗಿಸುವದು. ನೇರ ಸುಲಭವಾಗಿ ಸಾರ್ವಜನಿಕರಿಗೆ ತಲುಪಿಸಲು, ತಂತ್ರಜ್ಞಾನ ದಿಂದ ಸಾರ್ವಜನಿಕ ಕೈಗೆ ಶಕ್ತಿ, ದಾಖಲೆಗಳ ತಿದ್ದಲು ಕಳೆಯಲು ಅಸಾಧ್ಯ. ಹಾಗೂ ತ್ವರಿತ ಆಡಳಿತ ನೀಡಲು ಇದರಿಂದ ಸಾಧ್ಯ ಎಂದು ನುಡಿದರು.
ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿಟಲ್ ದಾಖಲೆಗಳಾಗಿ ಪರಿವರ್ತನೆಯಾಗುತ್ತದೆ. ರೆಕಾರ್ಡ್ ರುಮ್ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಯಾಗುತ್ತದೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವಾಗಲು, ತಿದ್ದಲು ಅಸಾಧ್ಯವಾಗಿದೆ. ಸಾರ್ಚಜನಿಕರು ನೇರವಾಗಿ ಪಡೆದುಕೊಳ್ಳುವ ಸೌಲಭ್ಯ ಸಿಗಲಿದೆ. ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಲುಪಿಸುವ ಯೋಜನೆಯಾಗಿದೆ. ವಿನಾಕಾರಣ ವಿಳಂಬ, ಅಡೆತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ಪ್ರಯತ್ನ ಸರ್ಕಾರದಿಂದ ನಡೆದಿದೆ. ಡಿಜಿಟಲ್ ಸ್ಪರ್ಶದಿಂದ ಉತ್ತಮ ಜನಪರ ಆಡಳಿತ ನಿಮ್ಮ ಭೂ ಒಡೆತನಕೊಂದು ಗ್ಯಾರಂಟಿ ನೀಡಿದಂತಾಗುತ್ತದೆ ಎಂದು ಭೂ ದಾಖಲೆಗಳ ಕುರಿತು ಸಚಿವ ಎಚ್. ಕೆ. ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ, ಗದಗ ಬೆಟಗೇರಿ ಅವಳಿ ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಾಬರ್ಜಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಸೇರಿದಂತೆ ಇನ್ನಿತರರು ಹಾಜರಿದ್ದರು.