Monday, February 17, 2025
Google search engine
Homeಉದ್ಯೋಗಗದಗ : ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ಕರೆ

ಗದಗ : ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ಕರೆ

ಗದಗ  ಜನೆವರಿ 20 : ಸಕಾಲ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳನ್ನು ನಿಗದಿತ ಅವಧಿಯಲಿಯೇ ವಿಲೇವಾರಿ ಮಾಡುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು. ಕೆಲವು ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊAಡು ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಉದ್ದೇಶಕ್ಕಾಗಿಯೇ ಸಕಾಲ ಯೋಜನೆ ಜಾರಿಗೊಳಿಸಲಾಗಿದ್ದು ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದರು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಸಕಾಲ ಯೋಜನೆಯ ಜಿಲ್ಲಾ ಮಟ್ಟದ ಸಭೆಗೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಸಮಾಜ ಕಲ್ಯಾಣ, ನಗರಸಭೆ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ವಿವಿಧ ಇಲಾಖೆಯವರು ಸಕಾಲ ಯೋಜನೆಯ ಅರ್ಜಿಗಳ ವಿಳಂಬ ತಪ್ಪಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರು ಮಾತನಾಡಿ ಇಲಾಖೆಯ ಅಧಿಕಾರಿಗಳು ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

 ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ