ಮುಂಡರಗಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಇದೇ ಜ.22 ರಂದು ಮುಂಡರಗಿ ಬಂದ್‌ಗೆ . ಡಾ॥ ಬಿ. ಆರ್. ಅಂಬೇಡ್ಕರ ಅಭಿಮಾನಿ ಬಳಗ, ಮುಂಡರಗಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕರೆ ನೀಡಲಾಗಿದೆ.
ಅಮಿತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆಯಿಂದ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ. ಕೇಂದ್ರ ಸರ್ಕಾರ ಅವರ ಸಚಿವ ಸ್ಥಾನದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಇದೇ ಜನೇವರಿ.22 (ಬುಧವಾರ)ದಂದು ಮುಂಡರಗಿ ಬಂದ್‌ಗೆ ಡಾ॥ ಬಿ. ಆರ್. ಅಂಬೇಡ್ಕರ ಅಭಿಮಾನಿ ಬಳಗ ಕರೆ ಕೊಟ್ಟಿದೆ.