ಮುಂಡರಗಿ ಜ.೨೨ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಇಂದು ಜ.22 ರಂದು ಮುಂಡರಗಿ ಬಂದ್‌ಗೆ . ಡಾ॥ ಬಿ. ಆರ್. ಅಂಬೇಡ್ಕರ ಅಭಿಮಾನಿ ಬಳಗ, ಮುಂಡರಗಿ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕರೆ ನೀಡಲಾಗಿತ್ತು
ಅಮಿತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆಯಿಂದ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ. ಕೇಂದ್ರ ಸರ್ಕಾರ ಅವರ ಸಚಿವ ಸ್ಥಾನದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕು ಎಂದು. ಡಾ॥ ಬಿ. ಆರ್. ಅಂಬೇಡ್ಕರ ಅಭಿಮಾನಿ ಬಳಗ, ಮುಂಡರಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಂದ್ ಕನ್ನಡಪರ, ಕಾರ್ಮಿಕ, ಸಂಘಟನೆಗಳ ಒಕ್ಕೂಟದಿಂದ ಬೆಂಬಲ ದೊರಕಿದೆ. ಬೆಳ್ಳಗ್ಗೆಯಿಂದಲೂ ಸಂಚಾರ ವಿರಳ, ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ಸೂಚಿಸಿದರು.
ಇದರ ಜೊತೆಗೆ ಬಸ್ ಸಂಚಾರ ಕ್ರಮೇಣ ಸ್ಥಗಿತಗೊಂಡಿದ್ದು, ಕೆಲ ಪ್ರಯಾಣಿಕರಿಗೆ ತೊಂದರೆ ಉಂಟಾಯಿತು, ವಾಹನ ಸಂಚಾರ ವಿರಳವಾಗಿದ್ದು, ಕಂಡುಬಂದಿದೆ.
ಬೆಳಗ್ಗೆ 11 ಗಂಟೆಗೆ ಹೋರಾಟ ವೇದಿಕೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮುಖಾಂತರ ಬಂದು ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.