Monday, February 17, 2025
Google search engine
Homeಉದ್ಯೋಗಗದಗ : ವಿವಿಧ ಅರ್ಜಿಗಳ ಆಹ್ವಾನ

ಗದಗ : ವಿವಿಧ ಅರ್ಜಿಗಳ ಆಹ್ವಾನ

ಅರ್ಜಿ ಆಹ್ವಾನ

ಗದಗ ಜನೆವರಿ 22 : ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ತಜ್ಞರ ಹುದ್ದೆಗಳಿಗೆ ಸರ್ಕಾರದ ಆದೇಶ ಪ್ರಕಾರ ಕರೆ ಆಧಾರಿತ ವೈದ್ಯಕೀಯ ಸೇವೆಯನ್ನು ನೀಡಲು ಅರ್ಹ ತಜ್ಞ ವೈದ್ಯರುಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಸದರಿ ತಜ್ಞ ವೈದ್ಯರುಗಳಿಗೆ ಲಭ್ಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಪ್ರತಿ ದಿನದ ದರದಂತೆ ಸಂಚಿತ ವೇತನವನ್ನು ಎಬಿಎಆರ್‌ಕೆ ನಿಧಿಯಿಂದ ಪಾವತಿಸಲಾಗುವದು.

ಇಚ್ಚೆಯುಳ್ಳ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂ-101, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ಇಲ್ಲಿಗೆ ತಮ್ಮ ಬಯೋಡೆಟಾ ಮತ್ತು ವಿದ್ಯಾರ್ಹತೆಗೆ ಸಂಬAಧಿಸಿದ ಎಲ್ಲಾ ಮೂಲ ದಾಖಲಾತಿಗಳ ದ್ವಿಪ್ರತಿಗಳೊಂದಿಗೆ ಜನೆವರಿ 27 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂ-101, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ಈ ಕಚೇರಿಗೆ ಸಂಪರ್ಕಿಸಬಹುದಾಗಿದೆ.

ತರಬೇತಿಗಾಗಿ ಅರ್ಜಿ ಆಹ್ವಾನ

ಗದಗ : ಜನೆವರಿ 22 : 2024-25 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಯುವಜನರಿಗೆ ಜಿಮ್ ಫಿಟ್ನೆಸ್ ಹಾಗೂ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸದರಿ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಜಿಮ್ಸ್ ತರಬೇತಿಯನ್ನು ಜನೆವರಿ 27 ರಿಂದ ಫೆಬ್ರುವರಿ 10 ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ , ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು ಫೆಬ್ರುವರಿ 11 ರಿಂದ 18 ರವರೆಗೆ ಯವನಿಕ ಸಭಾಂಗಣ ಬೆಂಗಳೂರು ಇಲ್ಲಿ ನಡೆಸಲಾಗುವುದು.

 ತರಬೇತಿಯನ್ನು ಕರ್ನಾಟಕದ ಯುವಕ/ಯುವತಿಯರಿಗೆ ಮಾತ್ರ ನೀಡಲಾಗುವುದು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಯುವಕ/ಯುವತಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಕಡ್ಡಾಯವಾಗಿ ಆರ್.ಡಿ. ಸಂಖ್ಯೆಯಿರುವ ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರವನ್ನು ಲಗತ್ತಿಸಿರಬೇಕು.

ಅರ್ಜಿದಾರರ ಹೆಸರು ಹಾಗೂ ಭಾಗಚಿತ್ರವುಳ್ಳ ಆಧಾರ್ ಪತ್ರವನ್ನು ಲಗತ್ತಿಸುವುದು.

 ಕನಿಷ್ಠ ವಿದ್ಯಾರ್ಹತೆ ಪಿಯುಸಿ (ಪಾಸ್/ಫೇಲ್) ಶಿಕ್ಷಣ ಹೊಂದಿರಬೇಕು. ಈ ತರಬೇತಿ ಶಿಬಿರವು 15 ದಿನಗಳ ಕಾಲ ನಡೆಯುತ್ತದೆ. ಅರ್ಜಿದಾರರ ಪ್ರಮಾಣ ಪತ್ರಗಳನ್ನು ಸಂಬAಧಿಸಿದ ಉಪ/ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸಲ್ಲಿಸಬೇಕುತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ/ಯುವತಿಯರಿಗೆ ಲಘು ಉಪಹಾರ ಒದಗಿಸಲಾಗುವುದು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅರ್ಜಿದಾರರು ದೈಹಿಕವಾಗಿ ಸದೃಢರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ದೂರವಾಣಿ ಸಂಖ್ಯೆ 08372-238345 ಸಂಪರ್ಕಿಸಬಹುದಾಗಿದೆ.

ಅರ್ಜಿ ಆಹ್ವಾನ

ಗದಗ : ಜನೆವರಿ 22: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಗದಗ ಜಿಲ್ಲೆಗೆ ಮಂಜೂರಾಗಿರುವ 1 ಹುದ್ದೆಯನ್ನು ಷರತ್ತಿಗೊಳಪಟ್ಟು ಸೃಜಿಸಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ತಿಳಿಸಿರುವುದರಿಂದ ಪಿಎಂಎAವಿವೈ ಜಿಲ್ಲಾ ಸಂಯೋಜಕರು ಈ ಹುದ್ದೆಗೆ ನಿಗದಿಪಡಿಸಿದ ನಿಬಂಧನೆಗೊಳಪಟ್ಟು ಅಭ್ಯರ್ಥಿಯನ್ನು ಗೌರವಧನದ ಆಧಾರದಲ್ಲಿ ಮಿಷನ್ ಶಕ್ತಿ ಯೋಜನೆ ಮಾರ್ಗಸೂಚಿಯಂತೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಬೇಕಾಗಿರುತ್ತದೆ. ಸದರಿ ಹುದ್ದೆಯ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದ್ದು, ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರೂಮ್ ನಂ:06 ಜಿಲ್ಲಾಡಳಿತ ಭವನ ಗದಗ ಇವರನ್ನು ಸಂಪರ್ಕಿಸುವುದು. ಭರ್ತಿ ಮಾಡಿದ ಅರ್ಜಿಗಳನ್ನು ಜನೆವರಿ 30 ರಂದು ಸಮಯ 5:30 ರೊಳಗಾಗಿ ಖುದ್ದಾಗಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಹಾಗೂ ನಿಬಂಧನೆಗಳಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ದೂರವಾಣಿ: 08372-220711 ಈ ವಿಳಾಸಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಜನೆವರಿ 27 ರಂದು ನೇರ ಸಂದರ್ಶನ

ಗದಗ : ಜನೆವರಿ 21: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸಾರ್ವಜನಿಕ ಆಸ್ಪತ್ರೆ ಮುಂಡರಗಿ, ರೋಣ, ನರಗುಂದ ಹಾಗೂ ಶಿರಹಟ್ಟಿ ಇಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳು ಮಂಜೂರಾಗಿರುತ್ತವೆ. ಸರ್ಕಾರದ ಸುತ್ತೋಲೆ ಪ್ರಕಾರ ಮಂಜೂರಾದ ಹುದ್ದೆಗಳನ್ನು ತಾತ್ಕಾಲಿಕವಾಗಿ ಅಥವಾ ಕ್ರಮಬಧ್ದವಾಗಿ ನೇಮಕವಾಗುವವರೆಗೆ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಂದರ್ಶನ (ವಾಕ್-ಇನ್-ಇಂಟರ್‌ವ್ಯೂವ್) ಮೂಲಕ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಇಚ್ಚೆಯುಳ್ಳ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂ-101, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ, ಗದಗ ಇಲ್ಲಿಗೆ ತಮ್ಮ ಬಯೋಡೆಟಾ ಮತ್ತು ವಿದ್ಯಾರ್ಹತೆಗೆ ಸಂಬAಧಿಸಿದ ಎಲ್ಲಾ ಮೂಲ ದಾಖಲಾತಿಗಳ ದ್ವಿಪ್ರತಿಗಳೊಂದಿಗೆ ಜನೆವರಿ 27 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ