ಗದಗ ಜನೆವರಿ 31: ವೈದ್ಯಕೀಯ ಶಿಕ್ಷಣ ಇಲಾಖೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ನೂತನ ಕ್ಯಾಥಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕದ ಉದ್ಘಾಟನೆ ಸಮಾರಂಭವನ್ನು ಫೆಬ್ರುವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಮಲ್ಲಸಮುದ್ರ ದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಜರುಗಲಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಅಸುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಲ್ತಾಫ್ ಕಾಗದಗಾರ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಸಿನ್ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಬಿ.ಎಲ್. ಸುಜಾತಾ ರಾಠೋಡ ಆಗಮಿಸುವರು.
ಜಿಮ್ಸ್ ನಿರ್ದೇಶಕರಾದ ಡಾ. ಬಸವರಾಜ ಪಿ ಬೊಮ್ಮನಹಳ್ಳಿ , ವೈದ್ಯಕೀಯ ಅಧೀಕ್ಷಕರಾದ ಡಾ.ರೇಖಾ ಎಸ್ ಸೋನಾವನೆ, ಪ್ರಾಂಶುಪಾಲರಾದ ಡಾ. ರಾಜು ಜಿ ಎಮ್ , ಆರ್ಥಿಕ ಸಲಹೆಗಾರರಾದ ಪ್ರಶಾಂತ ಜೆ.ಸಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಿ.ಸಿ.ಕರಿಗೌಡರ ಸರ್ವರಿಗೂ ಸ್ವಾಗತ ಕೋರಿದ್ದಾರೆ.