ಗದಗ : ತಾಲ್ಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ಹೆದ್ದಾರಿಯ ಸಾಂಘವಿ ಮೋಟಾರ್ಸ್ ಹತ್ತಿರ ಸರಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ ಬೆಳ್ಳಂ ಬೆಳಿಗ್ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮುಂಡರಗಿ ಕಡೆ ಹೊರಟ್ಟಿದ್ದ ಸರ್ಕಾರಿ ಬಸ್ ಬೈಕ್ ಸವಾರ ಗದಗ ಕಡೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರ ವಸಂತ (೧೯) ಕೊಪ್ಪಳ ಜಿಲ್ಲೆಯ ಮಾಗನೂರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.ಇವನು ಶ್ರೀ ಕೀರ್ತಿ ಪ್ರೋಜಕ್ಟ್ ಪ್ರೈವೇಟ್ ಲಿಮಿಟೆಡ್ ದಲ್ಲಿ ಸೂಪರವೈಜರ್ ಆಗಿ ಕೇಲಸ ಮಾಡುತ್ತಿದ್ದ ಎನ್ನಲಾಗಿದೆ.
ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ರಸ್ತೆಯ ರಾಜ್ಯ ಹೆದ್ದಾರಿಯ ಸಾಂಘವಿ ಮೋಟಾರ್ಸ್ ಹತ್ತಿರ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರವಿವಾರ 2/2/25, ರವಿವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ.
ಗದಗ ಗ್ರಾಮೀಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.