Wednesday, March 26, 2025
Google search engine
Homeಉದ್ಯೋಗಗದಗ : ವಿವಿಧ ಅರ್ಜಿಗಳ ಆಹ್ವಾನ

ಗದಗ : ವಿವಿಧ ಅರ್ಜಿಗಳ ಆಹ್ವಾನ

ಅರ್ಜಿ ಆಹ್ವಾನ

ಗದಗ ಫೆಬ್ರುವರಿ 6 : ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ ವಸತಿ ಕಾಯ್ದೆ ಅನ್ವಯ ಉಪವಿಭಾಗ ಮಟ್ಟದ ಸಮಿತಿ ರಚಿಸಲು ಸಫಾಯಿ ಕರ್ಮಚಾರಿಗಳ ಪುನರ್ ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಉಪವಿಭಾಗದಲ್ಲಿ ವಾಸಿಸುತ್ತಿರುವ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಾಮಾಜಿಕ ಕಾರ್ಯಕರ್ತರು (ಕಡ್ಡಾಯವಾಗಿ ಒಬ್ಬ ಮಹಿಳೆ ನೇಮಕ ಮಾಡುವುದು) ಅಧೀಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಆಸ್ತಕರು ನಿಗಧಿತ ನಮೂನೆಯಲ್ಲಿ ಫೆಬ್ರುವರಿ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಗಳನ್ನು ಗದಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ, ಕಛೇರಿಯಿಂದ ಪಡೆಯಬಹುದಾಗಿದೆ ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆ ನೀಡಿದ್ದಾರೆ

ಅರ್ಜಿ ಆಹ್ವಾನ

ಗದಗ ಫೆಬ್ರುವರಿ6 : ಅಪೇರಲ್ ಟ್ರೇನಿಂಗ್ ಅಂಡ್ ಡಿಸೈನ್ ಸೆಂಟರ್,ಕೌಶಲ್ಯ ವಿಕಾಸ ಮತ್ತು ಉದ್ಯಮಶೀಲತಾ ಮಂತ್ರಾಲಯ ಇವರ ಸಹಭಾಗಿತ್ವದಲ್ಲಿ Pಒಏಗಿಙ 4.0 ಯೋಜನೆಯಡಿ ಎಲ್ಲ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಾದ 6 ತಿಂಗಳ (570 ಗಂಟೆಗಳ) ಅವಧಿಯ ಫ್ಯಾಷನ್ ಡಿಸೈನರ್ ಉಚಿತ ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸುವವರು ಗದಗ ಜಿಲ್ಲೆಯ ನಿವಾಸಿಯಾಗಿರಬೇಕು, 20 ರಿಂದ 40 ವಯೋಮಾನದವರಾಗಿರಬೇಕು, ಕನಿಷ್ಠ 12ನೇ ತರಗತಿ/ಐಟಿಐ/ಡಿಪ್ಲೋಮಾ ಪಾಸಾಗಿರಬೇಕು. ಎಲ್ಲ ಹಿಂದುಳಿದ ವರ್ಗಕ್ಕೆ ಸೇರಿದ ಮೇಲಿನ ಅರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಪೇರಲ್ ಟ್ರೇನಿಂಗ್ ಅಂಡ್ ಡಿಸೈನ್ ಸೆಂಟರ್ (ಎ.ಟಿ.ಡಿ.ಸಿ) 1ನೇ ಮಹಡಿ, ಕುಷ್ಟಗಿ ಬಿಲ್ಡಿಂಗ್, ಪಾಲಾ ಬದಾಮಿ ರಸ್ತೆ ಬೆಟಗೇರಿ-ಗದಗ,

 ಈ ವಿಳಾಸಕ್ಕೆ ತಿಳಿಸಲಾದ (ದೃಢೀಕೃತ) ದಾಖಲಾತಿಗಳ 4 ಪ್ರತಿಗಳೊಂದಿಗೆ ಹಾಗು ಇತ್ತೀಚಿನ 6 ಭಾವಚಿತ್ರದೊಂದಿಗೆ ಫೆಬ್ರುವರಿ 22 ಒಳಗೆ ಸಂಪರ್ಕಿಸಿ ನಿಗದಿತ ನಮೂನೆಯಲ್ಲಿ ಖುದ್ದಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9844236030/ 9606640980 ಸಂಪರ್ಕಿಸಬಹುದು.

ಒನ್ ಕೇಂದ್ರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ

ಗದಗ : ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಖಾಲಿ ಇರುವ ಶಿವಾಜಿನಗರ ಗ್ರಾಮ ಪಂಚಾಯತಿಯ ಗ್ರಾಮ ಒನ್ ಕೇಂದ್ರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿನಾಂಕ: 15-02-2025 ರೊಳಗಾಗಿ ಅರ್ಜಿಗಳನ್ನು https://www.karnatakaone.gov.in/Public/GramOneFranchiseeTerms ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಗಳು, ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ