ಗದಗ. ಫೆ.14: ಕರ್ನಾಟಕದ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಅವರು ಫೆಬ್ರವರಿ 15 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಸದ ವಿವರ ಇಂತಿದೆ.
ಫೆಬ್ರವರಿ 15 ರಂದು ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಬೆಳಿಗ್ಗೆ 9 ಗಂಟೆಗೆ ಆಗಮಿಸುವರು. ನಂತರ ಬೆಳಗ್ಗೆ 10.15ಕ್ಕೆ ನಾಗಾವಿಯ ಗ್ರಾಮ ಗಂಗೋತ್ರಿ ಕ್ಯಾಂಪಸ್‌ನ ಕೌಶಲ್ಯ ವಿಕಾಸ ಭವನಕ್ಕೆ ಆಗಮಿಸಿ, ಉತ್ತಮ ಆಡಳಿತದಲ್ಲಿ ಲೋಕಾಯುಕ್ತ ಪಾತ್ರ ಕುರಿತು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವರು.
ನಂತರ ಮಧ್ಯಾಹ್ನ 12 ಗಂಟೆಗೆ ಗದಗನಿಂದ ಹುಬ್ಬಳ್ಳಿಗೆ ಪ್ರಯಾಣಿಸುವರು ಎಂದು ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್ ಎಂ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ.