ಗದಗ ಫೆಬ್ರುವರಿ 18 : ನಾಗಾವಿ ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಕಾರ್ಯಾಲಯ, ನಾಗಾವಿ ಇವರ ಆಶ್ರಯದಲ್ಲಿ 2019-2020 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜೀವ ಗಾಂಧಿ ಪಂಚಾಯತ ಸಶಕ್ತಿಕರಣ ಯೋಜನೆಗಳ ಒಗ್ಗೂಡಿಸುವಿಕೆಯಿಂದ ನಾಗಾವಿ ಗ್ರಾಮ ಪಂಚಾಯತಿಯ ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಅಧಿಕಾರಿಗಳು ಹಾಜರಿದ್ದರು.
ನಾಗಾವಿ ಗ್ರಾಮ ಪಂಚಾಯತಿಯ ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ
