ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ.
ಇನ್ನೂ 7.3 ಓವರ್‌ಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ವಿಜಯದ ಕೇಕೆ ಹಾಕಿತು. ಇದರಿಂದ ದುಬೈನ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಭಾರತದ ಪರ ಕ್ರಿಕೆಟ್ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
ಪಾಕ್ ನೀಡಿದ್ದ 241 ರನ್‌ಗಳ ಗುರಿಯನ್ನು ಬೆನ್ನತ್ತಿದ್ದ ರೋಹಿತ್ ಶರ್ಮಾ ಪಡೆ ಓವರ್‌ಗೆ ಕೇವಲ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 42.3 ಓವರ್‌ಗಳಲ್ಲಿ 244 ರನ್ ಬಾರಿಸಿ ಗೆಲುವಿನ ಗುರಿ ತಲುಪಿತು.
ವಿರಾಟ್ ಕೊಹ್ಲಿ ಸೆಂಚುರಿ ಬಾರಿಸುವ ಮೂಲಕ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ಮಾಡಿದರು. 111 ಬಾಲ್‌ಗಳಲ್ಲಿ 100 ರನ್ ಗಳಿಸುವ ಮೂಲಕ ಔಟಾಗದೇ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿ ಬಹಳ ದಿನಗಳ ನಂತರ ಮಿಂಚಿದರು.