Wednesday, March 26, 2025
Google search engine
Homeಗದಗಗದಗ : ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪಾರದರ್ಶಕವಾಗಿ ಜರುಗಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಗದಗ : ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪಾರದರ್ಶಕವಾಗಿ ಜರುಗಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಗದಗ  ಫೆಬ್ರುವರಿ 25:ಜಿಲ್ಲೆಯಲ್ಲಿ ಮಾರ್ಚ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಜರುಗಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಗೋಡೆಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅಗತ್ಯವಿರುವ ಗಾಳಿ , ಬೆಳಕು ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಆದ್ಯತೆ ಮೇರೆಗೆ ನೀಡಬೇಕು ಎಂದು ಸೂಚಿಸಿದರು.

ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿಸದಸ್ಯ ಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು.

ಪ್ರತಿಬಂಧಕಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಮಾರ್ಚ 1 ರಿಂದ 20 ರವರೆಗೆ ಬೆ 8 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ/ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು/ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರತಿಬಂಧಿಸಿದ ಯಾವುದೇ ವಸ್ತುಗಳನ್ನು ಸಂಬAಧಪಟ್ಟವರು ಪರೀಕ್ಷಾ ಕೇಂದ್ರದಡಿ ತೆಗೆದುಕೊಂಡು ಹೋಗಲು ನಿರ್ಬಂಧಿಸಿದೆ.

ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ದ್ವಿತೀಯ ಪಿಯುಸಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಜರುಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ ಅವರು ಮಾತನಾಡಿ ಮಾರ್ಚ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು 11904 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುಗಮವಾಗಿ ಜರುಗಲು ಕ್ರಮ ವಹಿಸಲಾಗಿದೆ ಎಂದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ, ಸಿ.ಸಿ.ಟಿವಿ ಅಳವಡಿಕೆ, ಸೂಕ್ತ ಬಂದೋಬಸ್ತ್ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯಲ್ಲಿನ ಪರೀಕ್ಷಾ ಕೇಂದ್ರಗಳ ವಿವರ : ನಗರದ ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಕಾಲೇಜು , ವಿ.ಡಿ.ಎಸ್.ಬಾಲಕಿಯರ ಪದವಿ ಪೂರ್ವ ಕಾಲೇಜು, ನಗರಸಭೆ ಪದವಿ ಪೂರ್ವ ಕಾಲೇಜು, ಎಚ್.ಸಿ.ಇ.ಎಸ್.ಪದವಿ ಪೂರ್ವ ಕಾಲೇಜು, ಕೆ.ವಿ.ಎಸ್.ಆರ್.ಸಂಯುಕ್ತ ಪದವಿ ಪೂರ್ವ ಕಾಲೇಜ್, ಎ.ಎಸ್.ಎಸ್. ಪದವಿ ಪೂರ್ವ ಕಾಲೇಜು, ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು, ಗದಗ ಬೆಟಗೇರಿಯ ಲೋಯಲಾ ಸಂಯುಕ್ತ ಪದವಿ ಪೂರ್ವ ಕಾಲೇಜು, ಗಜೇಂದ್ರಗಡ ತಾಲೂಕು ನರೇಗಲ್ ದ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು, ಗಜೇಂದ್ರಗಡದ ಎಸ್.ಎಂ.ಭೂಮರೆಡ್ಡಿ ಪದವಿ ಪೂರ್ವ ಕಾಲೇಜು, ಗಜೇಂದ್ರಗಡದ ಸರಕಾರಿ ಪದವಿ ಪೂರ್ವ ಕಾಲೇಜು, ನರಗುಂದದ ಲಯನ್ಸ್ ಪದವಿ ಪೂರ್ವ ಕಾಲೇಜು, ಮುಂಡರಗಿಯ ಜೆ.ಎ. ಪದವಿ ಪೂರ್ವ ಕಾಲೇಜು, ಮುಂಡರಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿಯ ಎಫ್.ಎಂ.ಡಬಾಲಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ರೋಣದ ಕಿತ್ತೂರು ಚೆನ್ನಮ್ಮ ಪದವಿ ಪೂರ್ವ, ಲಕ್ಷೆö್ಮÃಶ್ವರದ ಬಿ.ಸಿ.ಎನ್.ಪದವಿ ಪೂರ್ವ ಕಾಲೇಜು , ಲಕ್ಷೆö್ಮÃಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜು.

ಮಾರ್ಚ-2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ರ ವೇಳಾಪಟ್ಟಿ :

ಮಾರ್ಚ 1 ರಂದು ಕನ್ನಡ, ಅರೇಬಿಕ್ ( ಬೆ 10 ರಿಂದ ಮಧ್ಯಾಹ್ನ 1 ರವರೆಗೆ ), ಮಾರ್ಚ 3 ರಂದು ಗಣಿತ, ಶಿಕ್ಷಣ ಶಾಸ್ತç, ತರ್ಕಶಾಸ್ತç, ವ್ಯವಹಾರ, ಅಧ್ಯಯನ (ಬೆ 10 ರಿಂದ ಮ 1 ರವರೆಗೆ), ಮಾರ್ಚ 4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ( ಬೆ 10 ರಿಂದ ಮ 1 ರವರೆಗೆ), ಮಾರ್ಚ 5 ರಂದು ರಾಜ್ಯ ಶಾಸ್ತç , ಸಂಖ್ಯಾಶಾಸ್ತç ( ಬೆ 10 ರಿಂದ ಮ 1 ರವರೆಗೆ), ಮಾರ್ಚ 7 ರಂದು ಇತಿಹಾಸ, ಭೌತಶಾಸ್ತç ( ಬೆ 10 ರಿಂದ ಮ 1 ರವರೆಗೆ ), ಮಾರ್ಚ 10 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತç, ಭೂಗರ್ಭಶಾಸ್ತç , ಗೃಹ ವಿಜ್ಞಾನ (ಬೆ 10 ರಿಂದ ಮ 1 ರವರೆಗೆ ), ಮಾರ್ಚ 12 ರಂದು ಮನ:ಶಾಸ್ತç , ರಸಾಯನಶಾಸ್ತç, ಮೂಲಗಣಿತ ( ಬೆ 10 ರಿಂದ ಮ 1 ರವರೆಗೆ), ಮಾರ್ಚ 13 ರಂದು ಅರ್ಥಶಾಸ್ತç ( ಬೆ 10 ರಿಂದ ಮ 1 ರವರೆಗೆ ), ಮಾರ್ಚ 15 ರಂದು ಇಂಗ್ಲೀಷ್ ( ಬೆ 10 ರಿಂದ ಮ 1 ರವರೆಗೆ), ಮಾರ್ಚ 17 ರಂದು ಭೂಗೋಳಶಾಸ್ತç ( ಬೆ 10 ರಿಂದ ಮ 1 ರವರೆಗೆ), ಮಾರ್ಚ 18 ರಂದು ಜೀವಶಾಸ್ತç , ಸಮಾಜಶಾಸ್ತç, ವಿದ್ಯುನ್ಮಾನ ಶಾಸ್ತç, ಗಣಕವಿಜ್ಞಾನ ( ಬೆ 10 ರಿಂದ ಮ 1 ರವರೆಗೆ), ಮಾರ್ಚ 19 ರಂದು ಹಿಂದೂಸ್ತಾನಿ, ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೈಲ್ ಅಟೋಮೊಬೈಲ್ , ಹೆಲ್ತ್ ಕೇರ್ , ಬ್ಯೂಟಿ ಆಂಡ್ ವೆಲ್ ನೆಸ್ ( ಬೆ 10 ರಿಂದ ಮ 12.15 ರವರೆಗೆ ) , ಮಾರ್ಚ 20 ರಂದು ಹಿಂದಿ ( ಬೆ 10 ರಿಂದ ಮ 1 ರವರೆಗೆ) ಪರೀಕ್ಷೆಗಳು ಜರುಗಲಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ