ಗದಗ ಮಾರ್ಚ 3 : ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಡಾ. ಗೋವಿಂದಪ್ಪ ರಾಮಚಂದ್ರಪ್ಪ ವೇಷಗಾರ ಅವರು ಹಗಲು ವೇಷ ಕಲಾವಿದರಾಗಿದ್ದು 2024 ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ ನೀಡಲಾಗುವುದು. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ. 25,000 ಮತ್ತು ಇಬ್ಬರು ಕ್ಷೇತ್ರ ತಜ್ಞರಿಗೆ ತಲಾ ರೂ. 50,000/- ಗಳು ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲ ತಾಂಬೂಲ ನೀಡಿ ಗೌರವಿಸಲಾಗುವುದು. ಬೆಂಗಳೂರಿನಲ್ಲಿ ನಡೆದ ಸರ್ವಸದಸ್ಯರ ಸಭೆಗ ತೀರ್ಮಾನದಂತೆ ಜಾನಪದ ಕಲಾವಿದರ ಮತ್ತು ತಜ್ಞರನ್ನು 2024 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಪ್ರಕಟಣೆ ತಿಳಿಸಿದೆ.