ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಪೈಕಿ ಓರ್ವನ ಶವ ಪತ್ತೆಯಾಗಿದೆ. ನಿನ್ನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ಈಜಲು ಹೋದಾಗ ನೀರು ಪಾಲಾಗಿರುವ ದುರ್ಘಟನೆ ನಡೆದಿತ್ತು. ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ನೀರುಪಾಲಾದ ಈ ದುರ್ಘಟನೆ ಸಂಭವಿಸಿದೆ.
ಇಂದು ಮಹೇಶ್ ಬಡಿಗೇರ್ ಅವರ ಶವ ಪತ್ತೆಯಾಗಿದೆ. ಶರಣಪ್ಪ ಬಡಿಗೇರ್ (34) ಗುರುನಾಥ್ ಬಡಿಗೇರ್ (38) ಎನ್ನುವರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಸದ್ಯ ನದಿಯಲ್ಲಿ ನಾಪತ್ತೆಯಾಗಿರುವ ಮೂವರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಇಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.