19.9 C
New York
Saturday, June 28, 2025

Buy now

spot_img

ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌!

ಗದಗ: ಗದಗ ನಗರದ ಮುಳಗುಂದ ನಾಕಾ ಬಸ್ ಡಿಪೊ ಬಳಿ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಯತಪ್ಪಿ ಬಸ್ ಚಕ್ರದಡಿ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

50 ವರ್ಷದ ಈರಪ್ಪ ಕಣಗಿನಹಾಳ ಮೃತ ಬೈಕ್ ಸವಾರನಾಗಿದ್ದು, ಮಾರ್ಕೆಟ್ ಏರಿಯಾದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಈರಪ್ಪ, ಡೀಪೋ ಬಳಿ ಪಾರ್ಕ್ ಮಾಡಿದ್ದ ಕಾರ್ ಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ಹೊಡೆದ ಪರಿಣಾಮ ಆಯತಪ್ಪಿ ಗದಗ ಹಾನಗಲ್ ಮಾರ್ಗದವಾಗಿ ಹೊರಟಿದ್ದ ಬಸ್ ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಬೈಕ್ ಚಾಲಕ ತಲೆಯ ಮೇಲೆ ಬಸ್ ಹಿಂಬದಿ ಚಕ್ರ ಹರಿದು ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ನಿರ್ವಹಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news