ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ

ಗದಗ  ಮಾರ್ಚ 24 : 2025-26 ನೇ ಸಾಲಿನ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು 2-5-2026 ರಿಂದ 28-2-2026 ರವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಅರ್ಜಿಗಳನ್ನು ಮಾರ್ಚ 1 ರಿಂದ 31 ರವರೆಗೆ ವಿತರಿಸಲಾಗುವುದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನ ಏಪ್ರಿಲ್ 1 ಆಗಿದ್ದು ಏಪ್ರಿಲ್ 8 ರಂದು ಬೆ 11 ಗಂಟೆಗೆ ಗದಗ ಭೀಷ್ಮಕೆರೆ ಹತ್ತಿರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು. ಆಯ್ಕೆ ಪಟ್ಟಿಯನ್ನು ಏಪ್ರಿಲ್ 16 ರಂದು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ತಂದೆ/ ತಾಯಿ/ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಇದಕ್ಕೆ ಸಂಬAಧಿಸಿದAತೆ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡುವುದು. ಇಲಾಖೆಯ ವೆಬ್ ಸೈಟ್

  https://horticulturedir.karnataka.gov.in ನಲ್ಲಿ ಅಥವಾ ತೋಟಗಾರಿಕೆ ಕಚೇರಿಯಲ್ಲಿ ಮಾರ್ಚ 1 ರಿಂದ 31 ರವರೆಗೆ ಪಡೆಯಬಹುದಾಗಿದೆ . ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಸಹಾಯಕ ತೋಟಗಾರಿಕಾ ನಿರ್ದೇಶಕರು ( ರಾಜ್ಯ ವಲಯ) ಮತ್ತು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *