ಗದಗ: ಗದಗ ಜಿಲ್ಲಾ ವಕ್ಫ್ ಬೋರ್ಡ್ ನ ಹಾಲಿ ಅಧ್ಯಕ್ಷ, ಕಾಂಗ್ರೆಸ್‌ನ ಹಿರಿಯ ಮುಖಂಡ ಜಿ.ಎಂ ದಂಡಿನ(68) ಹೃದಯಾಘಾತದಿಂದ ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
9 ವರ್ಷಗಳಿಂದ ಗದಗ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು, ಜಿಲ್ಲೆಯಲ್ಲಿ ಮನೆ ಮಾತಾಗಿದ್ದರು. ಸೋಮವಾರ ಸಂಜೆ 5ಗಂಟೆಗೆ ಅಂತ್ಯಕ್ರಿಯೆ ಜರುಗಲಿದೆ.
ಸಂತಾಪ: ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್ ಪಾಟೀಲ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರಾದ ಜಿ.ಎಂ ದಂಡಿನ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.