ಗದಗ ಏಪ್ರಿಲ್ 11 : ಗದಗ ತಾಲೂಕು ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಗದಗ ತಾಲೂಕು ಅಂಧತ್ವ ಮುಕ್ತ ತಾಲೂಕು ಮಾಡುವ ಉದ್ದೇಶದಿಂದ ಗದಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜನರಿಗೆ ಉಚಿತ ಕಣ್ಣಿನ ತಪಾಸಣೆಯನ್ನು ಏಪ್ರಿಲ್ 15 ರಿಂದ 31 ರವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈಗೊಳ್ಳಲಾಗುವುದು. ತಪಾಸಣೆಯಲ್ಲಿ ಕಣ್ಣಿನ ಪೊರೆ ಇರುವ ರೋಗಿಗಳಿಗೆ ಉಚಿತವಾಗಿ ಶಸ್ತç ಚಿಕಿತ್ಸೆ ಕೈಗೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೇದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂದಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ಪ್ರಕಟಣೆ ತಿಳಿಸಿದೆ.