27.4 C
New York
Saturday, May 17, 2025

Buy now

spot_img

ಗದಗ : ಕುಡಿಯುವ ನೀರು ಸರಬರಾಜು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ

ಗದಗ ಏಪ್ರಿಲ್ 22 : ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬೇಕು. ಕುಡಿಯುವ ನೀರು, ಮೇವಿನ ಸ್ಥಿತಿಗತಿ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನೀರಿನ ಸಮಸ್ಯೆಯು ಉದ್ಭವಿಸಿದರೆ ಮುಂಜಾಗ್ರತಯಾಗಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಂತಹ ಬೋರ್‌ವೆಲ್‌ಗಳ ಸುಸ್ಥಿತಿಯಲ್ಲಿವೆಯೋ ಹೇಗೆ ಎಂಬುದರ ಕುರಿತು ಪರಿಶೀಲಿಸಬೇಕು. ಪ್ರಸಕ್ತ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಶುರುವಾಗಿದ್ದು ಮುಂಗಾರು ಮಳೆಯೂ ಕೂಡ ಉತ್ತಮವಾಗುವ ನಿರೀಕ್ಷೆಯಿದೆ ಎಂದರು.

ರೋಣ ಮತ್ತು ನರಗುಂದ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಕೆರೆಗಳಿಗೆ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ನೀರು ಪೋಲಾಗದಂತೆ ಅದನ್ನು ಮರುಬಳಕೆ ಮಾಡುವ ಕುರಿತು ಯೋಚಿಸಿ ನೀರಿನ ಸಂಪನ್ಮೂಲಗಳ ಸಮರ್ಪಕ ಬಳಕೆಯಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಎಲ್ಲ ನೀರಿನ ಮೂಲಗಳಲ್ಲಿ ನೀರು ಕುಡಿಯಲು ಯೋಗ್ಯ ಎಂಬುದರ ಕುರಿತು ಪರೀಕ್ಷೆ ನಡೆಸಬೇಕು. ಬೋರ್‌ವೆಲ್‌ದ ಸುತ್ತಮುತ್ತ ಕಲುಷಿತ ಅಂಶಗಳು ಇವೆಯೋ ಇಲ್ಲವೋ ಎಂಬುದರ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ವಾಟರ್ ಹೆಡ್ ಟ್ಯಾಂಕ್ ಸ್ವಚ್ಛತೆಗೆ ನಿಗಾ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಎಚ್.ನಾಗರಾಜ ಅವರು ಮಾತನಾಡಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಾಕಷ್ಟು ಮೇವಿನ ದಾಸ್ತಾನಿದೆ. ಯಾವುದೇ ಕೊರತೆಯಿರುವುದಿಲ್ಲ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರರುಗಳು . ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ