ಜೈಪುರ : ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 47ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಸೋತ ಗುಜರಾತ್ ಟೈಟನ್ಸ್ ಮೊದಲು ಬ್ಯಾಟಿಂಗ್ ಮಾಡಿ ಶುಭ್‌ಮನ್ ಗಿಲ್ ಹಾಗೂ ಜೋಸ್ ಬಟ್ಲರ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿದ್ದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 210 ರನ್‌ಗಳನ ಗುರಿಯನ್ನು ನೀಡಿದೆ.
ಈ ಗುರಿಯನ್ನು ಬೆನ್ನಟ್ಟಿರುವ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಕಣಕ್ಕಿಳಿದಿದ್ದಾರೆ. ಇಬ್ಬರೂ ಸಹ ಅಬ್ಬರದ ಆರಂಭ ಮಾಡಿದ್ದು, ಬೌಂಡರಿಗಳ ಸುರಿಮಳೆಗೈದಿದ್ದಾರೆ. ಅದರಲ್ಲೂ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ 11 ಸಿಕ್ಸರ್ ಸಹಿತ 100 ರನ್ ಬಾರಿಸಿದರು. ಅಂತಿಮವಾಗಿ 38 ಎಸೆತಗಳಲ್ಲಿ 101 ರನ್ ಬಾರಿಸಿ ಔಟ್ ಆದರು.
ಹೀಗೆ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿಚಿಕ್ಕ ವಯಸ್ಸಿಗೆ ಶತಕ ಬಾರಿಸಿದ ಆಟಗಾರ ಎಂಬ ಮಹಾನ್ ದಾಖಲೆಯನ್ನು ಬರೆದಿದ್ದಾರೆ. ಅಲ್ಲದೇ ಕ್ರಿಸ್ ಗೇಲ್ ಬಳಿಕ ಐಪಿಎಲ್‌ನಲ್ಲಿ ಅತಿವೇಗವಾಗಿ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ.