ಚುನಾವಣಾ ವೇಳಾ ಪಟ್ಟಿ ಪ್ರಕಟ
ಗದಗ ಮೇ 8: ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗದಗ ಜಿಲ್ಲೆಯ ಲಕ್ಷೆö್ಮÃಶ್ವರ ತಾಲೂಕಿನ ಶಿಗ್ಲಿ, ಗಜೇಂದ್ರಗಡ ತಾಲೂಕಿನ ನಿಡಗುಂದಿ, ಶಿರಹಟ್ಟಿ ತಾಲೂಕಿನ ಕೋಗನೂರ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ/ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಜರುಗಲಿದೆ.
ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದ್ದು ವಿವರ ಇಂತಿದೆ: ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನ ಮೇ 8 ಆಗಿದ್ದು, ನಾಮಪತ್ರಗಳನ್ನು ಮೇ 8 ರಿಂದ ಮೇ 14 ರವರೆಗೆ ಸಲ್ಲಿಸಬಹುದಾಗಿದೆ. ಮೇ 15 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನ ಮೇ 17 ಆಗಿರುತ್ತದೆ. ಮತದಾನವನ್ನು ಮೇ 25 ರಂದು ಬೆ 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮತಗಳ ಎಣಿಕೆಯು ಮೇ 28 ರಂದು ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಚುನಾವಣಾ ವಿಭಾಗದ ಪ್ರಕಟಣೆ ತಿಳಿಸಿದೆ.