20.6 C
New York
Thursday, May 15, 2025

Buy now

spot_img

ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ

ಯಶಸ್ವಿಯಾದ ಅಣುಕು ಪ್ರದರ್ಶನ

ಗದಗ : ವೈಮಾನಿಕ ದಾಳಿ ಎದುರಾದಾಗ ಸ್ಥಳಿಯ ಜನರು ಭಯಭೀತರಾಗದೇ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕೈಗೊಳಲಾಯಿತು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು.

ನಗರದ ವಿಡಿಎಸ್ ಟಿ ಮೈದಾನದಲ್ಲಿ ಗುರುವಾರ ನಡೆದ ಅಣುಕು ಪ್ರದರ್ಶನ ಜರುಗಿದ ನಂತರ ಮಾತಾನಾಡಿದ ಅವರು ಯುದ್ದದಂತಹ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರ ಹೇಗೆ ಕೆಲಸ ನಿರ್ವಹಿಸುತ್ತದೆ ಎಂದು ಅವರು ತಿಳಿಸಿದರು.

ನಗರದಲ್ಲಿ ವೈಮಾನಿಕ ದಾಳಿಯಾದಾಗ ಅದಕ್ಕೆ ಇಲಾಖೆಅಧಕಾರಿಗಳು ಯಾವ ತರಹ ಕಾರ್ಯಾಚರಣೆ, ಪರಿಹಾರ ಕಂಡುಕೊಳ್ಳುತ್ತೇವೆ ಎನ್ನುವುದ ತಿಳಿಸುವ ಅಣುಕು ಪ್ರದರ್ಶನ ಇದಾಗಿದ್ದು , ಬಾಂಬ್ ಬಿದ್ದಿದೆ ಎಂದು ಮಾಹಿತಿ ತಿಳಿದ ಕೂಡಲೇ ಬಾಂಬ್ ಸ್ಕ್ವಾಡ್ ತಕ್ಷಣ ಹೋಗಿ ಸ್ಥಳಿಯ ಪರಿಸ್ಥಿತಿ ಅರಿತು ಇನ್ನೂ ಸ್ವೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರೀಯಗೊಳಿಸಿದರು,‌ ಪೊಲೀಸ್ ಅಗ್ನಿಶಾಮಕ ದಳ ಅಂಬುಲೆನ್ಸ ಸ್ವಯಂಸೇವಕರು ಬಂದು ಭಯಭೀತರಾದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದುರು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಯಿತು, ಪ್ರಥಮ ಚಿಕಿತ್ಸೆ ಯ ಕ್ಯಾಂಪ್ ಗಳನ್ನು ಪ್ರಾರಂಬಿಸಲಾಯಿತು ಅವುಗಳು ಪರಿಸ್ಥಿತಿ ಗನುಗುಣವಾಗಿ ಕಾರ್ಯಗಳನ್ನು ನಿಭಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಯಿತು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾತನಾಡಿ ಅಣುಕು ಪ್ರದರ್ಶನ ಮೂಲಕ ಯಾವುದಾರರು ತುರ್ತುಸ್ಥಿತಿ ಎದುರಾದಾಗ ಅದನ್ನು ಎದುರಿಸಲು ಯಾವ ರೀತಿ ತಯಾರಿ ಆಗಿರಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಅಣುಕು ಪ್ರದರ್ಶನ ದಲ್ಲಿ 22 ಇಲಾಖೆ ಗಳು ಸೇರಿದಂತೆ ಎನ್ ಸಿ ಸಿ, ಎನ್ ಎಸ್ ಎಸ್ ,ಮಾಜಿ ಸೈನಿಕರು ಸ್ಕೌಟ್ಸ್ ಗೈಡ್ ಒಳಗೊಂಡು 300 ಜನ ಭಾಗವಹಿಸಿ ಬಾಂಬ್ ಸ್ಫೋಟವಾದಾಗ ಅದಕ್ಕೆ ಯಾವ ರೀತಿ ಪ್ರತೀಕ್ರೀಯೆ ನೀಡಬೇಕು. ಅಲರ್ಟ ಮೇಸೆಜ್ ಬಂದ ತಕ್ಷಣ ಯಾವ ತಂಡ ಯಾವ ಕೆಲಸವನ್ನು ಮಾಡಬೇಕು ಎನ್ನುವ ಜವಾಬ್ದಾರಿಗಳನ್ನು ಈ ಮೂಲಕ ತಿಳಿಸಲಾಯಿತು. ಅಣುಕು ಪ್ರದರ್ಶನ ದಲ್ಲಿ 18 ತಂಡಗಳು ಭಾಗವಹಿಸಿದ್ದವು ಎಂದು ತಿಳಿಸಿದರು.

ಅಣಕು ಪ್ರದರ್ಶನದ ನೈಜ ವಿವರ: ವೈಮಾನಿಕ ದಾಳಿಯಿಂದ ನಗರದ ಮನೆಗಳಿಗೆ ಬೆಂಕಿ ಹತ್ತಿ ಉರಿದವು ಮನೆಯಲ್ಲಿದ್ದ ಜನರು ಬೆಂಕಿಯಿಂದ ಗಾಯಗೊಂಡರು ದಾಳಿಯಿಂದ ಸುತ್ತಮುತ್ತಲಿನ ಜನರು ಮಕ್ಕಳು ಭಯಭೀತರಾದರು ಕೆಲವರಿಗೆ ಗಂಭೀರ ಗಾಯ ಸಂಭವಿಸಿ ಸ್ಥಳದಲ್ಲಿಯೇ ಮೂರ್ಛೆ ಹೋದರು. ವೈಮಾನಿಕ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ದೌಡಾಯಿಸಿ ಅಗ್ನಿ ನಂದಿಸುವ ಕೆಲಸ ಪ್ರಾರಂಭಿಸಿದರು ,ಅಗ್ನಿ ಸಂಭವಿಸಿದ ಮನೆಯೊಳಗಿದ್ದ ಜನರನ್ನು ಮನೆಯೊಳಗೆ ಹೋಗಿ ಹೋರ ತಂದು ಸಂರಕ್ಷಿಸಿದರು , ತುರ್ತು ಪರಿಸ್ಥಿತಿ ಸಹಾಯವಾಣಿಯನ್ನು ಪ್ರಾರಂಭಿಸಿದರು ,ಅಂಬುಲೆನ್ಸ ಗಳು ಬಂದ ತಕ್ಷಣ ಸ್ಥಳದಲ್ಲಿದ ಪೊಲೀಸ್ ಸಹಾಯದಿಂದ ಗಾಯಾಳುಗಳನ್ನು ಎತ್ತುಗೊಂಡು ಆಸ್ಪತ್ರೆ ಗೆ ಸ್ಥಳಾಂತರಗೊಳಿಸುವ ಕಾರ್ಯ ಪ್ರಾರಂಭಿಸಿದರು.ಜನರಿಗೆ ಪ್ರಥಮ ಚಿಕಿತ್ಸಾ ಕ್ಯಾಂಪ್ಗಳನ್ನು ಪ್ರಾರಂಭವಾಯಿತು,
ಸ್ತಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ಪರಿಹಾರ ತಂಡ , ಎಸ್ಕಾಂ ಎನ್ ಸಿ ಸಿ , ಎನ್ ಎಸ್ ಎಸ್ , ಸ್ಕೌಟ್ಸ್ ಗೈಡ್ಸ ತಂಡದವರು ಪರಿಸ್ಥಿತಿ ನಿರ್ವಹಣೆಯಲ್ಲಿ ಪಾಲ್ಗೊಂಡರು

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ ಬಿ ಸಂಕದ, ಪೊಲೀಸ್ ಹಿರಿಯ ಅಧಿಕಾರಿಗಳು ,ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು,ವಿದ್ಯಾರ್ಥಿಗಳು ಸಾರ್ವಜನಿಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ...