13.1 C
New York
Tuesday, October 14, 2025

Buy now

spot_img

ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ !

ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಲವರ್ ಜೊತೆಗೂಡಿ ಹೆಂಡತಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ.

ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಶಿವಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಎಸೆದ ನಾಲ್ಕು ದಿನದ ಬಳಿಕ, ವಿದ್ಯಾ ಪೊಲೀಸ್ ಠಾಣೆಗೆ ತೆರಳಿ ಗಂಡ ಶಂಕರಪ್ಪ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ ಪೊಲೀಸರು ಹುಡುಕಾಟ ನಡೆಸಿದ ಐದು ದಿನಗಳ ಬಳಿಕ ಶಂಕರಪ್ಪ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ತಿಳಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿದ್ಯಾ ಹಾಗೂ ಪ್ರಿಯಕರ ಶಿವಕುಮಾರ್ ಅವರನ್ನು ರೋಣ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...