ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.
ಗದಗ ನಗರದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಸರ್ಕಾರಿ ಶಾಲೆಯ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಿಗ್ಗೆ ವಾಕಿಂಗ್ ಬಂದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು, ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.