ಗದಗ : ಶಾಲೆಯ ಆರಂಭ ದಿನವೇ ಶಾಲಾ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿರುವ ಘಟನೆ ಗದಗ ಜಿಲ್ಲೆಯ ಆರ್.ಕೆ.ನಗರ ಬಳಿಯ ಅಂಡರ್ ಪಾಸ್ ನಲ್ಲಿ ನಡೆದಿದೆ.
ಶಾಲಾ ಬಸ್ ಗೆ ಮಿನಿ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಶಾಲಾ ಬಸ್ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಬಸ್ ಇದಾಗಿದ್ದು, ಶಾಲೆಗೆ ಮಕ್ಕಳನ್ನು ಕರೆತರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಗಾಯಾಳು ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಾನಾ ಸ್ಥಳಕ್ಕೆ ಗದಗ ಸಂಚಾರಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ.