27.2 C
New York
Thursday, July 17, 2025

Buy now

spot_img

ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ

ಗದಗ : ಜೂ.1: ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 3 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ:

ಜೂನ್ 3 ರಂದು ಬೆಳಿಗ್ಗೆ 11.05 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ಬೆ 11.40 ಗಂಟೆಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡುವರು. ಬಯಲು ವಸ್ತು ಸಂಗ್ರಹಾಲಯ ಆವರಣದ ಪ್ರಾಚ್ಯಾವಶೇಷಗಳ ವೀಕ್ಷಣೆ , ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿನೀಡುವರು. ಮಧ್ಯಾಹ್ನ 12.40 ಗಂಟೆಗೆ ಲಕ್ಕುಂಡಿ ಗ್ರಾಮದಿಂದ ಹೊರಟು ಗದಗ ನಗರಕ್ಕೆ ಆಗಮಿಸುವರು. ನಗರದ ಎಪಿಎಂಸಿ ಆವರಣದಲ್ಲಿನ ಸ್ವಾಮಿ ವಿವೇಕಾನಂದ ಭವನದಲ್ಲಿ ದಿ.ಕರ್ನಾಟಕ ಕುರುಬರ ಸಂಘ ಹಾಗೂ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘ ಗದಗ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4.30 ಗಂಟೆಗೆ ಗದಗ ನಗರದ ಪಂಡಿತ ಭೀಮಸೇನ ಜೋಶಿ ರಂಗಮಂದಿರದಲ್ಲಿ ಗದಗ ಬೆಟಗೇರಿ ವ್ಯಾಪಾರ , ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ 34 ಎಕರೆ ಪ್ರದೇಶದ ಪ್ರಾಧಿಕಾರದ ಪರಿಕಲ್ಪನೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news