27.2 C
New York
Thursday, July 17, 2025

Buy now

spot_img

ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

ಗದಗ  ಜೂನ್ 13 : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಜಿಲ್ಲೆಯ ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು,

ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮದ ಜಮೀನು,ಮನೆ, ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಜನರ ಸ್ಥಿತಿಗತಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಸಂದರ್ಭಕ್ಕನುಸಾರ ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿ ಹಾಗೂ ಸಿಬ್ಬಂದಿಗಳ ಸ್ಥಳದಲ್ಲಿದ್ದು ಸಮರ್ಥವಾಗಿ ನಿರ್ವಹಣೆ ಮಾಡಬೇಕು. ಸಮಸ್ಯೆ ತಲೆದೂರಿದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು.

ಪ್ರವಾಹ ಹಾಗೂ ಅತೀವೃಷ್ಟಿಯಿಂದ ಜನ ಜಾನುವಾರುಗಳ ಜೀವ ರಕ್ಷಣೆಗೆ ಪ್ರಥಮಾಧ್ಯತೆ ನೀಡಬೇಕು. ನಂತರದಲ್ಲಿ ಸಾರ್ವಜನಿಕರ ಆಸ್ತಿ ರಕ್ಷಣೆಗೆ ಅಧಿಕಾರಿ ವರ್ಗ ಮುಂದಾಗಬೇಕು. ತಗ್ಗು ಪ್ರದೇಶಗಳಲ್ಲಿನ ಜನಸಾಮಾನ್ಯರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳಲು ಸ್ಥಳೀಯ ಅಧಿಕಾರಿಗಳು ಸೂಚಿಸಬೇಕು. ಒಟ್ಟಾರೆ ಇಲಾಖಾಧಿಕಾರಿಗಳ ಸಮನ್ವಯದೊಂದಿಗೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆಯಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಅಬ್ಬಿಗೇರಿಯ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news