28.6 C
New York
Friday, July 4, 2025

Buy now

spot_img

ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ

ಗಜೇಂದ್ರಗಡ: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಗುರುವಾರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಗಜೇಂದ್ರಗಡ ತಾಲೂಕಿನ ನಿಡಗುಂದಿ ಮತ್ತು ಮಾರನಬಸರಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದರು.

ನಿಡಗುಂದಿ ಗ್ರಾಮದ ಸೊಬಗಿನ ಅವರ ಹೊಲದಿಂದ ಕೆಂಪಯ್ಯನವರ ಹೊಲದವರೆಗೆ ೨.೨೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಿದರು. ಈ ವೇಳೆ ರಸ್ತೆ ನಿರ್ಮಾಣದಲ್ಲಿ ಕ್ರಿಯಾಯೋಜನೆಯಂತೆ ರಸ್ತೆ ನಿರ್ಮಾಣ ಕಾರ್ಯ ನಡೆದಿದಿಯೇ ಎಂಬುದನ್ನು ಕಡತ ಪರಿಶೀಲಿಸಿ ತಿಳಿದುಕೊಂಡರು. ಬಳಿಕ ಗ್ರಾಮದ ಸಂಜೀವಿನಿ ವರ್ಕ್ ಶೆಡ್ ಮತ್ತು ಸಿಸಿ ರಸ್ತೆ ನಿರ್ಮಾಣ ಹಾಗೂ ಸರ್ಕಾರಿ ಕಾಲೇಜಿನಲ್ಲಿ ನಿರ್ಮಿಸಿದ ಪಿಂಕ್ ಶೌಚಾಲಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ಅವಲೋಕಿಸಿದರು.

ಮಾರಣಬಸರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಗ್ರಂಥಾಲಯ ಕಟ್ಟಡಕ್ಕೆ ಸಿಇಒ ಅವರು ಭೇಟಿ ನೀಡಿದರು. ಈ ವೇಳೆ ಗ್ರಂಥಾಲಯದ ಪುಸ್ತಕಗಳ ಸಂಗ್ರಹ ಕೋಣೆ, ಓದುಗರಿಗೆ ಅನುಕೂಲಕರವಾಗಿರುವ ಪಿಠೋಪಕರಣಗಳ ಗುಣಮಟ್ಟ, ಗ್ರಂಥಾಲಯದಲ್ಲಿ ತಂತ್ರಜ್ಞಾನ ಅಳವಡಿಕೆ ಕಾರ್ಯ ಸೇರಿದಂತೆ ಹಲವು ಮಾಹಿತಿಯನ್ನು ಗ್ರಂಥಪಾಲಕರಿಂದ ಪಡೆದುಕೊಂಡರು. ಬಳಿಕ ಗ್ರಾಮದ ಮೊಹರಂ ರಸ್ತೆ ಅಭಿವೃದ್ಧಿ, ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಶಾಲಾ ಕಟ್ಟಡವನ್ನು ಪರಿಶೀಲಿಸಿದರು. ಇದೇ ವೇಳೆ ನರೇಗಾ ಕಾಮಗಾರಿಗಳಿಂದ ಗ್ರಾಮಸ್ಥರಿಗೆ ಅನುಕೂಲತೆಯಾಗಿರುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯವನ್ನು ಭರತ್ ಎಸ್, ಅವರು ಪಡೆದುಕೊಂಡರು.

ನರೇಗಾ ಕಾಮಗಾರಿಗಳ ಜೊತೆಗೆ ಭರತ್ ಎಸ್, ಅವರು ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣೀಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ಕಾಲಕಾಲೇಶ್ವರ ಗ್ರಾಮದ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದದ ವೇಳೆ ೯ ನೇ ತರಗತಿಯ ವಿದ್ಯಾರ್ಥಿಯೊಬ್ಬಳು ಸಿಇಒ ಅವರ ಗಮನಸೆಳೆದಳು. ೯ ನೇ ತರಗತಿಯಲ್ಲಿ ೯೮% ಪರಿಶತ ಸಾಧನೆ ಮಾಡಿದ್ದಾಳೆ ಅಂತ ವಸತಿ ನಿಲಯದ ಶಿಕ್ಷಕರು ಸಿಇಒ ಅವರಿಗೆ ವಿದ್ಯಾರ್ಥಿಯನ್ನು ಪರಿಚಯಿಸಿದರು. ಈ ವೇಳೆ ವಿದ್ಯಾರ್ಥಿಗೆ ಸಿಇಒ ಅವರು, ೧೦ ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮಳಾಗಿ ತೇರ್ಗಡೆ ಹೊಂದುವಂತೆ ಹರಿಸಿದರು. ಜಿಲ್ಲೆಗೆ ಪ್ರಥಮ ಬೇಡ ಸರ್, ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂದು ಭರವಸೆ ನೀಡಿ ಸಿಇಒ ಅವರನ್ನು ಆಕರ್ಷಿಸಿದಳು. ವಿದ್ಯಾರ್ಥಿಯ ಮಾತು ಕೇಳಿ ನಾನೇ ಚಿಕ್ಕವನಾದೇ ಎಂದು ಆ ವಿದ್ಯಾರ್ಥಿಗೆ ಬೆನ್ನು ತಟ್ಟಿ ಶುಭಕೋರಿದರು.

ಬಳಿಕ ವಸತಿ ನಿಯಲದ ಕಟ್ಟಡ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆಯೇ ಎಂದು ತಿಳಿಯಲು ಸ್ವತಃ ವಿದ್ಯಾರ್ಥಿಗಳೊಂದಿಗೆ ಕ್ಲಾಸ್ ನಲ್ಲಿ ಕುಳಿತು ಶಿಕ್ಷಕರ ಪಾಠ ಆಲಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು ವಸತಿ ನಿಲಯದ ಆಹಾರ ಗುಣಮಟ್ಟ ಮತ್ತು ವಸತಿ ನಿಲಯದ ಕಟ್ಟಡ ಪರಿಶೀಲಿಸಿದರು. ಬಳಿಕ ತಾಲೂಕಿನ ಶಿಕ್ಷಕರಿಗೆ ಜಿಲ್ಲೆಯ ಫಲಿತಾಂಶ ಹೆಚ್ಚಿಸಲ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗಜೇಂದ್ರಗಡ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಫಣಿಬಂದ, ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕರು, ತಾಲೂಕಿನ ನರೇಗಾ ಸಿಬ್ಬಂದಿ ವರ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ