ಗದಗ ಜುಲೈ 8 : ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ 2022-23, 2023-24, 2024-25 ಮತ್ತು 2025-26 ನೆ ಸಾಲಿನಲ್ಲಿ ಡಿಪ್ಲೋಮ, ಪದವಿ / ಸ್ನಾತ್ತಕೋತ್ತರ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು https://sevasindhugs.karnataka.gov.in ಸೇವಾಸಿಂಧು ವೆಬ್ ಪೋರ್ಟ್್ಲ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದಿನಾಂಕ: 07-07-2025 ರಿಂದ 07-08-2025 ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಗದಗ ಹಾಗೂ ಗದಗ ವ್ಯಾಪ್ತಿಯ ವಿಶ್ವವಿದ್ಯಾಲಯ, ಸರ್ಕಾರಿ/ಅನುದಾನಿತ ಪದವಿ/ಸ್ನಾತಕೊತ್ತ್ತರ ಪದವಿ ಮತ್ತು ಡಿಪ್ಲೋಮಾ, ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನೆಯನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸಿಡೆಡ್, ಬ್ಯಾಂಕ್ ಖಾತೆ, ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರನ್ನು ಹೊಂದಿರತಕ್ಕದ್ದು, ಅರ್ಜಿ ಸಲ್ಲಿಸಿದ ನಂತರ ಸೇವಾಸಿಂದು ಪೋರ್ಟ್ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿ ಇದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯು ಅಪ್ರೂವ್ ಅಗಾದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಪ್ರೂವ್ ಮಾಡಿಸಿಕೊಳ್ಳಬೇಕಾಗಿರುತ್ತದೆ ಎಂದು ಈ ಮೂಲಕ ತಿಳಿಯಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 1800-599-7154 ಸಂಪರ್ಕಿಸಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗದಗ ಇವರಿಗೆ 08372-220609 ಸಂಖ್ಯೆ ಸಂಪರ್ಕಿಸಬಹುದೆAದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿರುತ್ತಾರೆ.