ಗದಗ ಜುಲೈ 11: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜುಲೈ 12 ರಂದು ಬೆಳಿಗ್ಗೆ 7.50 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆಯ ಮೂಲಕ ಹೊರಟು ಬೆಳಿಗ್ಗೆ 9.30 ಗಂಟೆಗೆ ಗದುಗಿಗೆ ಆಗಮಿಸಿ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 5.30 ಗಂಟೆಗೆ ಗದಗಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.