ಗದಗ ಜುಲೈ 17 : 2025-26 ನೇ ಸಾಲಿಗೆ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ಸಮುದಾಯದ ಐಐಎಂ, ಐಐಟಿ, ಐಐಎಸ್‌ಇ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್ ವಿದ್ಯಾರ್ಥಿಗಳು ಸೇವಾ ಸಿಂಧು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನ ಸೆಪ್ಟೆಂಬರ್ 30 ಆಗಿರುತ್ತದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.8.00 ಲಕ್ಷಕ್ಕಿಂತ ಮೀರಿರಬಾರದು .ಹಿಂದಿನ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (ಬ್ಯಾಕ್‌ಲಾಗ್) ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ಪಡೆಯುವ ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಜಿಲ್ಲಾ ನ್ಯಾಯಾಲಯದ ಎದುರುಗಡೆ, ಹುಬ್ಬಳ್ಳಿ ರೋಡ, ಗದಗ ಈ ಕಚೇರಿ ಸಂಪರ್ಕಿಸಬಹುದಾಗಿದೆ.