28.2 C
New York
Saturday, July 19, 2025

Buy now

spot_img

ಗದಗ : ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ 

ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ

ಗದಗ ಜುಲೈ 16 : ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ ಕಾರ್ಡ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜುಲೈ 18 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಎಪಿಎಂಸಿ ಯಾರ್ಡದ ಸ್ವಾಮಿ ವಿವೇಕಾನಂದ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ,ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಅವರುಗಳು ಆಗಮಿಸುವರು.

ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ರೋಹಿಣಿ ಸಿಂಧೂರಿ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಭಾರತಿ ಡಿ, ಸಾರಿಗೆ ಇಲಾಖೆಯ ಆಯುಕ್ತರಾದ ಯೋಗೀಶ್ ಎ.ಎಂ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ.ರವಿಕುಮಾರ್ ಅವರುಗಳು ಆಗಮಿಸುವರು.

ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ , ಧಾರವಾಡ ವಿಭಾಗ ಸಹಾಯಕ ಕಾರ್ಮಿಕ ಆಯುಕ್ತರಾದ ಸಚಿನ್ ವೈ ಹಳೇಮನಿ, ಗದಗ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸೂಕ್ತ ಮಾರ್ಗದರ್ಶನ ನೀಡಲಿ : ಸಂಸದ ಬಸವರಾಜ ಬೊಮ್ಮಯಿ ಗದಗ : ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ ಗದಗ : ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಗದಗ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಗದಗ : ಅವಳಿ ನಗರ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ : ಸಂಸದ ಬಸವರಾಜ ಬೊಮ್ಮಾಯಿ ಗದಗ : ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ  ಗದಗ : ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಅಕ್ರಮ ಗಾಂಜಾ ಮಾರಾಟ 6 ಜನರ ಬಂಧನ ಅಂದಾಜು ₹6,70,000 ಮೌಲ್ಯದ ಗಾಂಜಾ ವಶಕ್ಕೆ..! ಗದಗ : SP ಬಿ.ಎಸ್ ನೇಮಗೌಡ ವರ್ಗಾವಣೆ : ನೂತನ ಗದಗ SP ರೋಹನ್ ಜಗದೀಶ ನೇಮಕ ಗದಗ : ಎತ್ತಿನ ಬಂಡಿಗೆ ಕಾರು ಡಿಕ್ಕಿ; ಎರಡು ಎತ್ತು ಮತ್ತು 4 ರೈತರಿಗೆ ಗಾಯ ..!