ಗದಗ ಜುಲೈ 20 : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಜುಲೈ 21 ಮತ್ತು 22 ರ ಗದಗ ಜಿಲ್ಲಾ ಪ್ರವಾಸದ ವಿವರ.
ಜುಲೈ 21 ರಂದು ಬೆಳಿಗ್ಗೆ 8:30 ಗಂಟೆಗೆ ಹುಬ್ಬಳ್ಳಿಯಿಂದ ನರಗುಂದಕ್ಕೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ 10:30 ಗಂಟೆಗೆ ಗದಗ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಜರುಗುವ ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳುವರು.
ಮಧ್ಯಾಹ್ನ 12:30 ಗಂಟೆಗೆ ಮಹಾತ್ಮಗಾಂಧಿ ಗ್ರಾ.ಪಂ.ರಾಜ್ ವಿಶ್ವವಿದ್ಯಾಲಯದಲ್ಲಿ ಜರುಗುವ ಮಾನವ ಹಕ್ಕುಗಳ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯದಲ್ಲಿ ಭಾಗವಹಿಸುವರು.
ಜುಲೈ 22 ರಂದು ಮದ್ಯಾಹ್ನ 12 ಗಂಟೆಗೆ ಗದಗ ದಿಂದ ಶಿರಹಟ್ಟಿಗೆ ತೆರಳಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಶಿರಹಟ್ಟಿ ತಾಲೂಕಿನ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5:30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕೈಗೊಂಡು ಹುಬ್ಬಳ್ಳಿಗೆ ತೆರಳಿ ಅಲ್ಲಿಂದ ರಾತ್ರಿ 10.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ಸಚಿವರ ಕಾರ್ಯಲಯ ಪ್ರಕಟನೆ ತಿಳಿಸಿದೆ.