20.4 C
New York
Tuesday, September 16, 2025

Buy now

spot_img

ಗದಗ : ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್. ಕರೆ

ನುಲಿಯ ಚಂದಯ್ಯ ಜಯಂತಿ : ಪೂರ್ವಭಾವಿ ಸಭೆ :

ಗದಗ  ಅಗಸ್ಟ 4 : ನುಲಿಯ ಚಂದಯ್ಯ ಜಯಂತಿಯನ್ನು ಅಗಸ್ಟ 9 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಆಚರಿಸಲಾಗುತ್ತಿದೆ, ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನುಲಿಯ ಚಂದಯ್ಯ ಜಯಂತಿ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ತಾಲೂಕು, ಗ್ರಾಮ ಪಂಚಾಯತಿ ಹಾಗೂ ಶಾಲೆಗಳಲ್ಲಿಯೂ ಸಹ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಸಾಧನೆಗೈದ 5 ಜನರಿಗೆ ಹಾಗೂ ಎಸ್.ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್. ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಅವರು ಮಾತನಾಡಿ ಜಯಂತಿಯ ವೇದಿಕೆಯ ಕಾರ್ಯಕ್ರಮದ ಮುಂಚಿತವಾಗಿ ಮೆರವಣಿಗೆಯು ನಗರದ ಕಿತ್ತೂರು ಚೆನ್ನಮ್ಮ ಸರ್ಕಲ್ ದಿಂದ ಕಾರ್ಯಕ್ರಮದ ಸ್ಥಳಕ್ಕೆ ತಲುಪಲಿದೆ. ನುಲಿಯ ಚಂದಯ್ಯ ಅವರ ಜೀವನ ಸಾಧನೆಗಳ ಕುರಿತು ಪ್ರೊ. ಎಂ.ಸಿ. ಕಟ್ಟಿಮನಿ ಅವರು ಉಪನ್ಯಾಸ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಶಹನಾಯಿ ಕಲಾ ತಂಡ ಸೇರಿದಂತೆ ಎರಡು ಕಲಾ ಪ್ರಕಾರಗಳು ಪಾಲ್ಗೊಳ್ಳಲಿವೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ, ಸಮಾಜದ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಲಾಗುವುದು ಜೊತೆಗೆ ಪ್ರಚಾರಕ್ಕಾಗಿ ನಗರದ ವಿವಿಧೆಡೆ ಬ್ಯಾನರ್ ಅಳವಡಿಸಲಾಗುವುದು ಎಂದು ಸಭೆಗೆ ವಿವರಿಸಿದರು.

ಈ ಸಂದರ್ಭದಲ್ಲಿ ನುಲಿಯ ಚಂದಯ್ಯ ಸಮಾಜದ ಪ್ರಮುಖರಾದ ಮೋಹನ ಭಜಂತ್ರಿ, ಸುರೇಶ ಕಟ್ಟಿಮನಿ, ಮಾಂತೇಶ, ಭೀಮಸೇನ, ಪರಶುರಾಮ ಕಟ್ಟಿಮನಿ, ಅಶೋಕ ಕಟ್ಟಿಮನಿ, ಎಸ್.ಡಿ.ಭಜಂತ್ರಿ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ