10.5 C
New York
Thursday, October 23, 2025

Buy now

spot_img

ಬೆಳ್ಳಟ್ಟಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಗದಗ : ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾ‌ ಭವನದಲ್ಲಿ ಆಗಸ್ಟ್‌ 25 ರಂದು ಸೋಮವಾರ ಬೆಳಿಗ್ಗೆ 10:30 ಗಂಟೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸುವ ಸಭೆಯಲ್ಲಿ ಸರ್ಕಾರದ ಎಲ್ಲ ಕಚೇರಿಗಳ ತಾಲೂಕು ಮಟ್ಟದ ಸರಕಾರಿ ಅಧಿಕಾರಿಗಳು ಹಾಜರಿರುತ್ತಾರೆ. ಯಾವುದೇ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ನೀಡಬಹುದಾಗಿದೆ.

ಸರಕಾರದ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ, ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳು ಸೇರಿದಂತೆ ಇನ್ನಿತರೆ ಅಕ್ರಮಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ವಿಜಯ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news