ಗದಗ : ಗದಗ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಮುಂಗಾರು ಹಂಗಾಮಿನ ವಾಣಿಜ್ಯ ಬೆಳೆಯಾದ ಹೆಸರು ಕಾಳು ಬೆಳೆದ ರೈತರ ಪಾಡು ಹೇಳತೀರದಾಗಿದೆ.
ಗದಗದಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ರಾಶಿ ಮಾಡಿ ಒಣಗಲು ಹಾಕಿದ್ದ ಅಪಾರ ಪ್ರಮಾಣದ ಹೆಸರು ನೀರು ಪಾಲಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳು ರೈತರು ಗೋಳು ಕೇಳುವವರಿಲ್ಲ ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಬೆಳೆ ಪರಿಹಾರ ಒದಗಿಸಬೇಕು ಎಂದು ರೈತರ ಆಗ್ರಹವಾಗಿದೆ 
ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದಲ್ಲಿ ರೈತರು ಹೆಸರು ಫಸಲು ರಾಶಿ ಮಾಡಿ ಮುಂಡರಗಿ ರಸ್ತೆ ಮತ್ತು ಕೊಪಳ್ಳ ರಸ್ತೆಯ ಆವರಣದಲ್ಲಿ ಒಣಗಲು ಹಾಕಿದ್ದರು. ಆದರೆ, ಇಡೀ ಸಂಜೆ ಸುರಿದ ಧಾರಾಕಾರ ಮಳೆಗೆ ರಸ್ತೆಯ ನೀರು ಉಕ್ಕಿ ಹರಿದು ಹೆಸರು ಕಟಾವು ಮಾಡಿ ಹಾಕಿದ ಆವರಣ ಸಂಪೂರ್ಣ ಜಲಾವೃತವಾಗಿದೆ. ಬೆಳೆ ನಷ್ಟದಿಂದ ಅನ್ನದಾತ ಬೇಸರಗೊಂಡಿದ್ದಾನೆ.ವರುಣಾರ್ಭಟಕ್ಕೆ ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದು, ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


 
                                    
