21.3 C
New York
Sunday, September 14, 2025

Buy now

spot_img

ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಗದಗ  ಸೆಪ್ಟಂಬರ್ 10 : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಏಡ್ಸ್ ಪ್ರೀವೇನ್‌ಷನ್ ಸೋಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಐ.ಎಮ್.ಎ, ರೋಟರಿ ಸೆಂಟ್ರಲ್ ಗದಗ, ಲಾಯನ್ಸ್ ಕ್ಲಬ್ ಗದಗ-ಬೆಟಗೇರಿ, ಶಿಕ್ಷಣ ಇಲಾಖೆ, ಕ್ರೀಡಾ ಇಲಾಖೆ, ರಕ್ಷಣೆ ಸಂಸ್ಥೆ, ಸೃಷ್ಟಿ ಸಂಕುಲ ಸಂಸ್ಥೆ, ಚೈತನ್ಯ ಸಂಸ್ಥೆ, ನವಚೇತನ ಸಂಸ್ಥೆ, ಗದಗ ಜಿಲ್ಲೆಯ ಎನ್.ಎಸ್.ಎಸ್. ಘಟಕಗಳು ಹಾಗೂ ರೆಡ್ ರಿಬ್ಬನ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಮ್ಯಾರಾಥಾನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರಿಡಾಂಗಣದಲ್ಲಿ ಬುಧವಾರ ಮ್ಯಾರಾಥಾನ ಸ್ಪರ್ಧೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ಹೆಚ್.ಐ.ವಿ/ಏಡ್ಸ್ ತಡೆಗಟ್ಟಲು ತೀವ್ರತರವಾದ ಐ.ಇ.ಸಿ ಪ್ರಚಾರಾಂದೋಲನ-2025 ರ ಅಂಗವಾಗಿ ರೆಡ್ ರಿಬ್ಬನ್ ಕಾಲೇಜು ವಿದ್ಯಾರ್ಥಿಗಳಿಗಾಗಿ 5 ಕಿ.ಮೀ. ಮ್ಯಾರಾಥಾನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹೆಚ್.ಐ.ವಿ. ಪ್ರಮಾಣ ಇಳಿಮುಖವಾಗಿದ್ದು, ವಿದ್ಯಾರ್ಥಿಗಳು ಹೆಚ್.ಐ.ವಿ.ಏಡ್ಸ್ ಬಗ್ಗೆ ಮಾಹಿತಿ ತಿಳಿದುಕೊಂಡು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕೆಂದು ಹೇಳಿದರು. ತೀವ್ರತರವಾದ ಐ.ಇ.ಸಿ. ಪ್ರಚಾರಾಂದೋಲನದ ಘೋಷ ವಾಕ್ಯದಂತೆ “ಸುಸ್ಥಿರ ಡಿಜಿಟಲ್ ಅಭಿವೃದ್ಧಿಗಾಗಿ ಸ್ಥಳೀಯ ಯುವಜನತೆಯ ಪಾತ್ರ ಹಾಗೂ ಗುರಿಗಳು” ಘೋಷಣೆಯಂತೆ ಯುವಕರು ಸಂಯಮದಿAದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಧೃಢ ಆರೋಗ್ಯವನ್ನು ಹೊಂದಿ ಸಮೃಧ್ದ ಭಾರತವನ್ನು ನಿರ್ಮಾಣ ಮಾಡಲು ಕೈ ಜೋಡಿಸಬೇಕೆಂದು ಕರೆ ನೀಡಿದರು.

ಬಾರತೀಯ ರೆಡ್ ಕ್ರಾಸ್ ಸಂಸ್ಥೆಯ ಡಾ. ಆರ್.ಎನ್. ಗೋಡಬೇಲೆ ಮಾತನಾಡಿ ವಿದ್ಯಾರ್ಥಿಗಳು ಯವ್ವನದಲ್ಲಿ ತಮ್ಮ ಜೀವನವನ್ನು ಜೋಪಾನ ಮಾಡಿಕೊಂಡು ಆರೋಗ್ಯಕರ ನಡುವಳಿಕೆಗಳನ್ನು ರೂಪಿಸಿಕೊಳ್ಳಲು ಕರೆ ನೀಡಿದರು.

ಡಾ. ಅರುಂಧತಿ ಕುಲಕರ್ಣಿರವರು ಮಾತನಾಡಿ ಹೆಚ್.ಐ.ವಿ. ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಜಿಲ್ಲೆಯ ಯುವ ಸಮುದಾಯ ಜಾಗೃತಿಯನ್ನು ಮೂಡಿಸಿ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರಲು ಶ್ರಮಿಸಬೇಕೆಂದು ತಿಳಿಸಿದರು ಮ್ಯಾರಾಥಾನ ನಡೆಸುವ ಉದ್ದೇಶ ಹೆಚ್.ಏಡ್ಸ್. ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ.ಏಡ್ಸ ತಡೆ ಕಾಯ್ದೆ-2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ಸಹಾಯವಾಣಿ 1097, ಎಸ್,ಟಿ.ಐ. ಖಾಯಿಲೆಗಳು ಇತಾದಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಸ್ಪರ್ಧೆಯ ಉದ್ದೇಶ ಎಂದು ಹೇಳಿದರು.

ಆರೋಗ್ಯವಂತ ಯುವ ಸಮುದಾಯ ದೇಶದ ಸಂಪನ್ಮೂಲವಾಗಿ ದೇಶದ ಅಭಿವೃದ್ಧಿಗೆ ಹಾಗೂ ಸಮಾಜದ ಒಳಿತಿಗಾಗಿ ಸೇವಾ ಮನೋಭಾವ ಬೆಳೆಸಿಕೊಳ್ಳಲು ತಿಳಿಹೇಳಿದರು.

ಮ್ಯಾರಾಥಾನ ಸ್ಪರ್ಧೆಯಲ್ಲಿ ಪುರುಷರಲ್ಲಿ ಪ್ರಥಮ ಸ್ಥಾನವನ್ನು ರಮೇಶ ಸಿಂಗಡಾನಕೇರಿ, ದ್ವಿತೀಯ ಸ್ಥಾನವನ್ನು ದೇವರಾಜ ದೊಡಮನಿ, ತೃತೀಯ ಸ್ಥಾನವನ್ನು ಅಶೋಕ ವಡ್ಡರ ಪಡೆದುಕೊಂದಿದ್ದು ಪ್ರಶಸ್ತಿಗೆ ಭಾಜನರಾದರು. ವಿದ್ಯಾರ್ಥಿನಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದ್ರಾಕ್ಷಾಯಿಣಿ ಕರ್ಣಿ, ದ್ವಿತೀಯ ಸ್ಥಾನವನ್ನು ಪ್ರೀತಿ ಬ. ಮುಗಳಿ, ತೃತೀಯ ಸ್ಥಾನವನ್ನು ಅಕ್ಷತಾ ಕಲಗುಡಿ ಪಡೆದುಕೊಂಡಿದ್ದು ಪ್ರಶಸ್ತಿಗೆ ಭಾಜನರಾದರು.

ಮ್ಯಾರಾಥಾನದಲ್ಲಿ ಸುಮಾರು 250 ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮ್ಯಾರಾಥಾನ ಜಾಗೃತಿ ಯಶಸ್ವಿಯಾಯಿತು.

ಕ್ರೀಡಾ ಇಲಾಖೆ ತರಬೇತಿದಾರರಾದ ಮಂಜುನಾಥ ಬಾಗಡೆ, ಶ್ರೀಮತಿ ವಿದ್ಯಾ ಕುಲಕರ್ಣಿ, ಗದಗ ತಾಲೂಕಿನ ಆರೋಗ್ಯ ನೀರಿಕ್ಷಣಾಧಿಕಾರಿಗಳ ಸಂಘದ ಪದಾಧಿಕಾರಿಗಳು, ಜಿಲ್ಲೆಯ ರೆಡ್ ರಿಬ್ಬನ್ ಹಾಗೂ ಎನ್.ಎಸ್.ಎಸ್. ಅಧಿಕಾರಿಗಳು, ಆರೋಗ್ಯ ಇಲಾಖೆಯ ರೂಪಸೇನ್ ಚೌವ್ಹಾಣ, ಸಿದ್ದಪ್ಪ ಲಿಂಗದಾಳ, ಬಸವರಾಜ ಹಿರೇಹಾಳ, ಗುರುರಾಜ ಕೋಟ್ಯಾಳ, ಗಣೇಶ ಬಾಗಡೆ, ಪ್ರವೀಣ ರಾಮಗಿರಿ, ಜಿಲ್ಲೆಯ ಎಲ್ಲ ಐಸಿಟಿಸಿ, ಎ.ಆರ್.ಟಿ. ಡ್ಯಾಪ್ಕೂ ಸಿಬ್ಬಂದಿ, ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ, ರಕ್ಷಣೆ ಸಂಸ್ಥೆಯ ಹಜರತ್‌ಬಿ ಮತ್ತು ಸಿಬ್ಬಂದಿ, ಚೈತನ್ಯ ಸಂಸ್ಥೆಯ ಸುನೀಲ್ ಮತ್ತು ಸಿಬ್ಬಂದಿ, ನವಚೇತನ ಸಂಸ್ಥೆಯ ಭಾರತಿ ಹಾಗೂ ಎಲ್ಲ ಸಿಬ್ಬಂದಿ ಹಾಜರಿದ್ದರು.

ಜೈ ಭೀಮ ಗೀಗೀ ಜಾನಪದ ಕಲಾ ತಂಡ ನೀಲಗುಂದ ಇವರು ಜನಪದ ಗೀತೆಗಳ ಮೂಲಕ ಜಾಗೃತಿ ಮೂಡಿಸಿದರು.

ಬಸವರಾಜ ಲಾಳಗಟ್ಟಿ ಸ್ವಾಗತಿಸಿದರು. ರಾಜೇಂದ್ರ ಗಡಾದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

.ಹೆಚ್ಐ.ವಿ. ಏಡ್ಸ್ ಮಾರಣಾಂತಿಕ ಖಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಯುವಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಇಲಾಖೆ ಹಾಗೂ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮ್ಯಾರಾಥಾನ ಸ್ಪರ್ಧೆ ಆಯೋಜಿಸಲಾಗಿದೆ – ಡಾ. ಅರುಂಧತಿ ಕುಲಕರ್ಣಿ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ ಗದಗ : ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ನೂತನ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ ಸಮಾರಂಭ ಗದಗ : ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ