ಗದಗ : ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಶೀಲ್ದಾರ ಡಿ.ಟಿ.ವಾಲ್ಮೀಕಿ ಅವರನ್ನು ಅಮಾನತ್ತು ಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ 17,997 ಅನರ್ಹರಿಗೆ ಪಿಂಚಣಿ ಮಂಜೂರಾತಿ ಆಗಿರುವುದು ತಿಳಿದು ಬಂದಿದ್ದು ಇದರ ಸತ್ಯಾಸತ್ಯತೆಗಾಗಿ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಅನರ್ಹರಿಗೆ ವಿತರಣೆಯಾಗುತ್ತಿರುವ ಪಿಂಚಣಿ ಹಣ ತಕ್ಷಣ ನಿಲ್ಲಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸಾಕಷ್ಟು ವಿಚಾರಣೆ ನಡೆಸಿ ಅನರ್ಹರಿಗೆ ಕೊಡುವಂತಹ ಸೌಲಭ್ಯ ನಿಲ್ಲಿಸುವ ಕುರಿತು ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ
ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದಾಗಿ ಕಚೇರಿಗೆ ಹೋಗಿ ಪರಿಶೀಲನೆ ನಡೆಸಲಾಗಿ ಕಾನೂನು ಸಚಿವ ಹೆಚ್ ಕೆ ಪಾಟೀಲ್ ದಿಢೀರ್ ಭೇಟಿ ನೀಡಿದ್ದ ವೇಳೆ, ಪತಿ ಬದುಕಿದ್ದರು ಸಹ ವಿಧವಾ ವೇತನ ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಪರಿಶೀಲನೆ ವೇಳೆ ದಾಖಲೆ ಸಮೇತ ಅಧಿಕಾರಿ ಸಿಕ್ಕಾಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಾನತ್ತು ಕ್ರಮ ವಹಿಸಲಾಗಿದೆ.ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.