ಗದಗ : ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ದಿನಾಂಕ:03.10.2025 ರಂದು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾಧ ಮೂಲಕ ಸಭೆಯನ್ನು ಜರುಗಿಸಲಾಗಿರುತ್ತದೆ.
ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ ನೋಂದಾಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಾಕಾಷ್ಟು ಸಂಖ್ಯೆಯಲ್ಲಿ ನಮೂನೆ-18 ರ ಅರ್ಜಿ ಫಾರ್ಮಗಳು ಲಭ್ಯವಿದ್ದು, ಸದರಿ ಅರ್ಜಿಗಳನ್ನು ಅರ್ಹ ಎಲ್ಲ ಪದವೀಧರರು ಪಡೆದು, ಅದರೊಂದಿಗೆ ಸರಿಯಾದ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ನಿರ್ದೇಶಿಸಿರುತ್ತಾರೆ.
ಹೊಸ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು/ ಉಪವಿಭಾಗಾಧಿಕಾರಿಗಳು/ ತಹಶೀಲ್ದಾರರ ಕಚೇರಿಗಳಲ್ಲಿ ಸಹಾಯವಾಣಿಯನ್ನು (Help Desk) ಸ್ಥಾಪಿಸಲು ನಿರ್ದೇಶಿಸಿರುತ್ತಾರೆ.
ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ತಯಾರಿಸುತ್ತಿರುವ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೋಂದಾಯಿಸಲು ಸಾರ್ವಜನಿಕರಿಗೆ/ ಮತದಾರರಿಗೆ ಅಗತ್ಯ ಜಾಗೃತಿ ಮೂಡಿಸಲು ನಿರ್ದೇಶನ ನೀಡಿರುತ್ತಾರೆ. ಸದರಿ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನೀಡಿದ ನಿರ್ದೇಶನದಂತೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳು/ಜಿಲ್ಲಾಧಿಕಾರಿಗಳು, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಇವರಿಗೆ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಾಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಕೆ.ಎಂ ಜಾನಕಿ ಇವರು ಸೂಚನೆ ನೀಡಿರುತ್ತಾರೆ.