17.2 C
New York
Friday, October 17, 2025

Buy now

spot_img

ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ

ಗದಗ  ಅಕ್ಟೋಬರ್ 10: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ಗದಗ ತಾಲೂಕಿನ ಬ್ಯಾಂ ಕ ರ‍್ಸ ಕಾಲೋನಿಯ ಜಾಕಿರಹುಸೆನ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು. ಇದರಿಂದ ರೋಗ ರುಜಿನೆಗಳನ್ನು ತಡೆಗಟ್ಟಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ., ಮಾತನಾಡಿ ಸೆಪ್ಟೆಂಬರ ಮಾಹೆಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಬೊಜ್ಜುತನ ನಿವಾರಣೆ, ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದು, ಪೋಷಣ ಭಿ ಪಢಾಯಿ ಭಿ, ಶಿಶು & ಚಿಕ್ಕ ಮಕ್ಕಳ ಆಹಾರ ಅಭ್ಯಾಸಗಳು, ಪುರುಷರ ಸಹಬಾಗಿತ್ವದ ಹಾಗೂ ಇಲಾಖೆಯ ವಿವಿಧ ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಡಾ. ಗಡಾದ ವೈಧ್ಯಾಧಿಕಾರಿಗಳು ಆರೋಗ್ಯ ಇಲಾಖೆ ಇವರು ಮಾತನಾಡಿ ಪೋಷಣ ಮಾಸಾಚರಣೆಯ ಇತಿಹಾಸದ ಕುರಿತು ಹಾಗೂ ಸ್ವಸ್ಥ ನಾರಿ ಸಶಕ್ತ ಪರಿವಾರ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ರಾಧಾ ಜಿ ಮಣ್ಣೂರ ನಿರೂಪಣಾಧಿಕಾರಿಗಳು , ಶ್ರೀಮತಿ ಸುರೇಖಾ ಮಲ್ಲಾಪೂರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕು. ಸಂಗೀತಾ ಹೂಗಾರ ಪೋಷಣ ಜಿಲ್ಲಾ ಸಂಯೋಜಕರು, ಕು. ಪವನ ಕಾಟೀಗರ ಪೋಷಣ ಜಿಲ್ಲಾ ಕಾರ್ಯಕ್ರಮ ಸಹಾಯಕರು, ಶ್ರೀಮತಿ ಕಾವೇರಿ ಚೇಗೂರ ಪೋಷಣ ತಾಲೂಕು ಸಂಯೋಜಕರು, ಗದಗ ಯೋಜನೆಯ ಎಲ್ಲ ವಲಯ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಭಾಗವಹಿಸಿದ್ದರು.

ಶ್ರೀಮತಿ ಫಾತಿಮಾ ಚುಳ್ಕಿ ಸ್ವಾಗತಿಸಿದರು, ಶ್ರೀಮತಿ ರುಕ್ಮಿಣಿ ದೇವಪೂರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಹಮ್ಮಿಕೊಂಡ ಕಾರ್ಯಕ್ರಮಗಳು :-ಪೌಷ್ಠಿಕ ಆಹಾರಗಳÀ ಪ್ರಾತ್ಯಕ್ಷಿಕೆ. 6 ತಿಂಗಳ ಮೇಲ್ಪಟ್ಟ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಕಾರ್ಯಕರ್ತೆ ಹಾಗೂ 0 ರಿಂದ 6 ವರ್ಷದ ಮಕ್ಕಳಿಂದ ವಯಸ್ಸಿಗೆ ತಕ್ಕಂತೆ ಮಗುವಿನ ಚಟುವಟಿಕೆಗಳ ಕುರಿತಾದ ಪಾತ್ಯಕ್ಷಿಕೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಮುದ್ದು ಮಕ್ಕಳಿಂz ವಿವಿಧ ಸಂಸೃತಿಕ ಕಾರ್ಯಕ್ರಮಗಳು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news