Thursday, September 19, 2024
Google search engine
Homeಉದ್ಯೋಗಗದಗ : ಸರ್ಕಾರಿ ಶಾಲೆಯ ಪೌಷ್ಠಿಕ ಆಹಾರ,ಕಳ್ಳತನ ; ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು...

ಗದಗ : ಸರ್ಕಾರಿ ಶಾಲೆಯ ಪೌಷ್ಠಿಕ ಆಹಾರ,ಕಳ್ಳತನ ; ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು !

ಗದಗ : ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಶಾಲೆಯ ಸಿಬ್ಬಂದಿಗಳೇ ಕಳ್ಳತನಕ್ಕೆ ಇಳಿದಿರುವ ಘಟನೆ ನಡೆದಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಪೌಷ್ಠಿಕ ಆಹಾರ, ಅಕ್ಕಿ,ಬೇಳೆ, ಹಾಲಿನ ಪೌಡರ್ ಗಳನ್ನು ಶಾಲೆಯ ಸಿಬ್ಬಂದಿಗಳೇ ಮನೆಗೆ ಕೊಂಡೊಯ್ಯುತ್ತಿದ್ದು, ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಐವರು ಅಡುಗೆ ಸಹಾಯಕರು ಶಾಲೆಯಲ್ಲಿದ್ದ ಪೌಷ್ಠಿಕ ಆಹಾರವನ್ನು ಕದ್ದು ಸಾಗಿಸುತ್ತಿದ್ದರು. 35 ಕೆಜಿ ಅಕ್ಕಿ, 2 ಕೆಜಿ ಬೇಳೆ, 10 ಕೆಜಿ ಗೋಧಿ, ಹಾಲಿನ ಪುಡಿ ಸಮೇತವಾಗಿ ತಳ್ಳುಗಾಡಿಯಲ್ಲಿ ಹಾಕಿಕೊಂಡು ಸಾಗಾಟ ಮಾಡುತ್ತಿದ್ದರು. ಈ ವೇಳೆ ಗ್ರಾಮಸ್ಥರು ಶಾಲಾ ಸಿಬ್ಬಂದಿಗಳ ಕಳ್ಳಾಟ ಬಯಲು ಮಾಡಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಬ್ಬಂದಿಯನ್ನು ಹಿಡಿದುಕೊಟ್ಟಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು