ಗದಗ ಅಗಷ್ಟ26: 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ನರಗುಂದ ಮೌಲಾನಾ ಆಜಾದ ಮಾದರಿ ಶಾಲೆಯಲ್ಲಿ ಖಾಲಿಯಿರುವ ಸಮಾಜ ವಿಜ್ಞಾನ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸಪ್ಟೆಂಬರ್ 03 ರೊಳಗಾಗಿ ತಮ್ಮ ಶೈಕ್ಷಣಿಕ ದಾಖಲಾತಿಗಳನ್ನು ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಮಾದರಿ ಶಾಲೆ, ನರಗುಂದ ಇಲ್ಲಿಗೆ ಖುದ್ದು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾAತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.