ಗದಗ ಅಗಸ್ಟ 26 : ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಸೋಮವಾರ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ಭಗವಾನ್ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಗಣ್ಯರು ಹಾಜರಿದ್ದರು.