Thursday, September 19, 2024
Google search engine
Homeಗದಗಗದಗ : ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ

ಗದಗ : ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ

ಗದಗ  ಸೆಪ್ಟೆಂಬರ್ 4: ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ರವರ ನೇತೃತ್ವದಲ್ಲಿ ಹಾಗೂ ಸಂಬAಧಿಸಿದ ಸ್ಥಳಿಯ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡAತೆ ಜಿಲ್ಲಾ ಮಟ್ಟದ ಜನತಾ ದರ್ಶನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 18 ರಂದು ಗದಗ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲು ಗದಗ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿರುತ್ತಾರೆ.

ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಲು ಗದಗ ಜಿಲ್ಲಾಡಳಿತ ಭವನದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲದಾರ ಕಾರ್ಯಾಲಯಗಳಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಸಂಬAದಿಸಿದ ಅರ್ಜಿಗಳ ಸ್ವೀಕರಿಸುವ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಸೆಪ್ಟೆಂಬರ್ 5 ರಿಂದ 17 ರವರೆಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅಗತ್ಯ ದಾಖಲೆಗಳೊಂದಿಗೆ ಸದರಿ ಜಿಲ್ಲಾ ಮಟ್ಟದ ಜನತಾ ದರ್ಶನ ಅರ್ಜಿ ಸ್ವೀಕಾರ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆಪ್ಟೆಂಬರ್ 18 ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು