14.7 C
New York
Friday, May 9, 2025

Buy now

spot_img

ಗದಗ : ಪ್ರಕೃತಿಯ ಸೊಬಗನ್ನು ಸವಿಯಿರಿ: ಡಿಎಫ್‌ಒ ಲೇಖರಾಜ್

ಗದಗ ಸಪ್ಟೆಂಬರ್4 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಇವರಗಳ ಸಹಭಾಗಿತ್ವದಲ್ಲಿ ಬುಧವಾರ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪ್ರವಾಸಿಗರು ಜಿಪ್‌ಲೈನ್ ನಲ್ಲಿ ಸಂಚರಿಸುತ್ತಿದ್ದಾಗ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಾಗ ಅವರನ್ನು ಹೇಗೆ ರಕ್ಷಣೆ ಮಾಡಬೇಕೆಂಬ ಮಾದರಿಯನ್ನು ಎನ್.ಡಿ.ಆರ್.ಎಫ್. ತಂಡದವರು ಪ್ರಾತ್ಯಕ್ಷಿಕೆ ಮುಖಾಂತರ ಪ್ರದರ್ಶಿಸಿ ತಿಳಿಸಿಕೊಟ್ಟರು.

ಎನ್‌ಡಿಆರ್‌ಎಫ್ ಪಡೆಯ ಕಮಾಂಡೆಂಟ್ ಅಖಿಲೇಶ್ ಮಾತನಾಡಿ ಜಿಪ್‌ಲೈನ್ ನಲ್ಲಿ ತಾಂತ್ರಿಕ ತೊಂದರೆಯಿಂದ ಸಿಲುಕಿದವರನ್ನು ರಕ್ಷಣೆ ಮಾಡುವ ಬಗ್ಗೆ ಸವಿವರವಾಗಿ ವಿವರಿಸಿದರು, ಜಿಪ್ ಲೈನ್ ರೆಸ್ಕೂ÷್ಯ ಗೆ ಸಂಬಂಧಿಸಿದ ವಿಷಯವನ್ನು ಒದಗಿಸಲು ರಾಷ್ಟಿçÃಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಾ ಸಿದ್ದವಿರುತ್ತದೆ ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಮಾತನಾಡಿ ಜಿಪ್ ಲೈನ್ ರೆಸ್ಕೂ÷್ಯ ಕುರಿತಾದ ಪ್ರದರ್ಶನವೂ ಎಲ್ಲಾ ಅರಣ್ಯ ಸಿಬ್ಬಂದಿಗೆ ತುಂಬಾ ಉಪಯುಕ್ತವಾಗಿದ್ದು, ಜಿಪ್ ನಲ್ಲಿ ಯಾವುದೇ ತೊಂದರೆ ಎದುರಾದರೂ ಎದುರಿಸುವ ಮಾಹಿತಿ ಒದಗಿಸಿ ನಮ್ಮೆಲ್ಲರಲ್ಲಿ ಉತ್ಸಾಹ ತಂದಿದ್ದಕ್ಕೆ ಎನ್ ಡಿಆರ್ ಎಫ್ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಉದ್ಯಾನವನಕ್ಕೆ ಆಗಮಿಸಿದ ಸಾರ್ವಜನಿಕರು ಸಾಲುಮರದ ತಿಮ್ಮಕ್ಕ ಪಾರ್ಕ್ ನಲ್ಲಿರುವ ಜಿಪ್ ಲೈನ್ ಅನ್ನು ಯಾವುದೇ ಭಯವಿಲ್ಲದೆ ಧೈರ್ಯದಿಂದ ಸಂಚರಿಸಿ ಪ್ರಕೃತಿಯ ಸೊಬಗನ್ನು ಮುಕ್ತವಾಗಿ ಸವಿಯಬಹುದಾಗಿದೆ ಮತ್ತು ಯಾವುದೇ ರೀತಿಯ ತೊಂದರೆಗಳು ಎದುರಾದರೂ ಅದನ್ನು ಪರಿಹರಿಸುವ ಸಾಮರ್ಥ್ಯ ಅರಣ್ಯ ಇಲಾಖೆಗೆ ಇದೆ ಎಂದು ಭರವಸೆ ನೀಡಿದರು.

ಉದ್ಯಾನವನದ ವೀಕ್ಷಕರ ಅಭಿಪ್ರಾಯ

ಉದ್ಯಾನದಲ್ಲಿರುವ ಜಿಪ್‌ಲೈನ್ ವ್ಯವಸ್ಥೆ ಅತ್ಯಂತ ಖುಷಿ ವಿಚಾರ ಎಷ್ಟೋ ಜನರ ಜಿಪ್ ಲೈನ್ ನಲ್ಲಿ ಸಂಚರಿಸುವ ಕನಸನ್ನು ನನಸಾಗಿಸಲು ಸುವರ್ಣ ಅವಕಾಶ ಇದಾಗಿದೆ. ಎನ್‌ಡಿಆರ್‌ಎಫ್ ಮತ್ತು ಅರಣ್ಯ ಇಲಾಖೆಯ ರಕ್ಷಣಾ ವ್ಯವಸ್ಥೆ ಸಾರ್ವಜನಿಕರಲ್ಲಿ ಧೈರ್ಯ ತುಂಬಿದಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞ ಶಿವಾನಂದ ರಾಜನಾಳ, ಇನ್ಸ್ಪೆಕ್ಟರ್ ಕೃಷ್ಣ , ವಲಯ ಅರಣ್ಯ ಅಧಿಕಾರಿ ವೀರೇಂದ್ರ ಮರಿಬಸಣ್ಣವರ್, ಉಪವಲಯ ಅರಣ್ಯ ಅಧಿಕಾರಿ ಸಚಿನ್ ಬಿಸನಳ್ಳಿ , ಅಗ್ನಿಶಾಮಕ ದಳದ ಇನ್ಸ್ ಪೆಕ್ಟರ್ ವೆಂಕಟೇಶ್ ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ