14.4 C
New York
Friday, May 9, 2025

Buy now

spot_img

ಗದಗ : ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಗದಗ  ಸೆಪ್ಟೆಂಬರ್ 5; 2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟಿçÃಯ ಮತ್ತು ರಾಷ್ಟಿçÃಯ ಮಟ್ಟದ ಅಧೀಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಸೆಪ್ಟೆಂಬರ್ 24 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆಗಳು ಸಹಾಯಕ ನಿರ್ದೇಶಕರರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿ ಗದಗ ಇಲ್ಲಿ ಲಭ್ಯ ಇವೆ.

ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. (ಆರ್.ಡಿ. ನಂಬರ ಇರುವ ಜಾತಿ ಪ್ರಮಾಣ ಪತ್ರ). ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75ರಷ್ಟು ರೂ.15.00 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25%ರಷ್ಟು ವೆಚ್ಚವನ್ನು ಸ್ವಯಂ ಭರಿಸುವ ಶರತ್ತಿಗೆ ಬದ್ದರಾಗಿರಬೇಕು. ಕ್ರೀಡಾಪಟುಗಳು ಅಂತರಾಷ್ಟಿçÃಯ /ರಾಷ್ಟಿçÃಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು. ಜಿಮ್ ಸಲಕರಣೆಗಳನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುವುದು.

ಕ್ರೀಡಾಪಟುಗಳು ಕರ್ನಾಟಕ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ. ಕ್ರೀಡಾಪಟುಗಳು ಸ್ವಯಂ ದೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬAಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರ ಮೂಲಕ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08372- 238345 ರ ಮೂಲಕ ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ